Connect with us

    FILM

    45 ಕೋಟಿ ಬೆಲೆಬಾಳುವ ಮನೆ ಖರೀದಿಸಿದ ಕುಡ್ಲದ ಚೆಲುವೆ ಪೂಜಾ ಹೆಗ್ಡೆ

    ಮಂಗಳೂರು ಎಪ್ರಿಲ್ 14: ಬಾಲಿವುಡ್ ಸೇರಿದಂತೆ ತಮಿಳು ತೆಲುಗು ಚಿತ್ರರಂಗದಲ್ಲಿ ಛಾಪು ಮೂಡಿಸಿರುವ ಕರಾವಳಿ ಬೆಡಗಿ ಪೂಜಾ ಹೆಗ್ಡೆ ಮುಂಬೈನಲ್ಲಿ 45 ಕೋಟಿ ಬೆಲೆ ಬಾಳುವ ಐಷರಾಮಿ ಮನೆ ಖರೀದಿ ಮಾಡಿದ್ದಾರೆ.


    ಮುಂಬೈನ ಬಾಂದ್ರಾದಲ್ಲಿ 45 ಕೋಟಿ ರೂ. ಮೌಲ್ಯದ ಮನೆ ಖರೀದಿ ಮಾಡಿದ್ದಾರೆ. ಮನೆಯ ವಿಸ್ತೀರ್ಣ 4000 ಚದರ ಅಡಿ ಎಂದು ಹೇಳಲಾಗ್ತಿದೆ. ಬಾಲಿವುಡ್ ಸ್ಟಾರ್ ನಟಿ- ನಟಿಯರು ವಾಸಿಸುವ ಏರಿಯಾದಲ್ಲಿಯೇ ಮನೆ ಖರೀದಿ ಮಾಡಿದ್ದಾರೆ.

    ಟಾಲಿವುಡ್‌ನಲ್ಲಿ ರಶ್ಮಿಕಾ, ಶ್ರೀಲೀಲಾ ಹವಾ ಜಾಸ್ತಿ ಆದ್ಮೇಲೆ ಬಾಲಿವುಡ್‌ನತ್ತ ನಟಿ ಮುಖ ಮಾಡಿದ್ದರು. ಹಿಂದಿ ಸಿನಿಮಾಗಳಲ್ಲಿ ಅವಕಾಶಗಳು ಹೆಚ್ಚಾಗಿದ್ದು, ಈ ಹಿನ್ನಲೆ ಇದೀಗ ಬೆಲೆಬಾಳುವ ಮನೆ ಖರೀದಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply