Connect with us

FILM

ನಟಿ ಪೂಜಾ ಹೆಗ್ಡೆ ಕಾಪು ಮಾರಿಗುಡಿಗೆ ಭೇಟಿ…!!

ಉಡುಪಿ ಮೇ 03: ಸದ್ಯ ತೆಲುಗು ತಮಿಳು ಸಿನೆಮಾ ಇಂಡಸ್ಟ್ರೀಯಲ್ಲಿ ಬಹು ಬೇಡಿಕೆ ನಟಿಯಾಗಿರುವ ಕರಾವಳಿ ಮೂಲದ ನಟಿ ಪೂಜಾ ಹೆಗ್ಡೆ ಉಡುಪಿ ಜಿಲ್ಲೆಯ ಕಾಪು ಮಾರಿಗುಡಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.


ಮಂಗಳವಾರದ ಶುಭ ದಿನದಂದು ದೇವಿಯ ಸನ್ನಿಧಾನದಲ್ಲಿ ನಡೆಯುವ ಸಾಂಪ್ರದಾಯಿಕ ದರ್ಶನ ಸೇವೆಯಲ್ಲಿ ಭಾಗವಹಿಸಿದ್ದರು. ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಸೇವೆಯಲ್ಲಿ ಪಾತ್ರಿಗಳಿಂದ ಆಶೀರ್ವಾದ ಪಡೆದರು.

 

ಈ ಹಿಂದೆಯೂ ಮಾರಿಗುಡಿಗೆ ಬಂದಿದ್ದ ಪೂಜಾ ಹೆಗ್ಡೆ ಕ್ಷೇತ್ರದ ಬಗ್ಗೆ ತಮಗಿರುವ ಅಗಾಧ ಭಕ್ತಿ ಹಾಗೂ ಪ್ರೀತಿಯನ್ನು ಈ ವೇಳೆ ವ್ಯಕ್ತಪಡಿಸಿದರು. ಕುಟುಂಬ ಸದಸ್ಯರೊಂದಿಗೆ ದೇವಾಲಯದ ಅವರಣದಲ್ಲಿ ಕೆಲ ಕಾಲ ಕಳೆದರು.

https://youtu.be/oN1cOdY61_8

Advertisement
Click to comment

You must be logged in to post a comment Login

Leave a Reply