LATEST NEWS
ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮೊಗೆರೋಡಿ ಕನ್ಸ್ಟ್ರಕ್ಷನ್ ತೆಕ್ಕೆಗೆ
ಮಂಗಳೂರು ಅಗಸ್ಟ್ 12: ಪುಂಜಾಲಕಟ್ಟೆ ಚಾರ್ಮಾಡಿ ಕಾಮಗಾರಿ ಹೆದ್ದಾರಿ ಸಮಸ್ಯೆ ಪರಿಹರಿಸಲು ಇದೀಗ ಕಾಮಗಾರಿಯನ್ನು ಗುತ್ತಿಗೆದಾರ ಮೊಗೆರೋಡಿ ಕನ್‌ಸ್ಟ್ರಕ್ಷನ್ ಗೆ ವಹಿಸಲಾಗಿದೆ.
ಬೆಳ್ತಂಗಡಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ ಹೆದ್ದಾರಿ ಅಭಿವೃದ್ಧಿಗೆ ಆದ್ಯತೆ ನೀಡಿ ಸಾಧನೆ ಮಾಡುತ್ತಿದೆ. ನಳಿನ್ ಕುಮಾರ್ ಕಟೀಲ್ ಸಂಸದರಾಗಿದ್ದಾಗ ಮಂಜೂರಾದ ಹೆದ್ದಾರಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದು ನನ್ನ ಆದ್ಯತೆಯಾಗಿದೆ ಎಂದು ತಿಳಿಸಿದರು.
‘ಪುಂಜಾಲಕಟ್ಟೆ – ಚಾರ್ಮಾಡಿ ಹೆದ್ದಾರಿ ಕಾಮಗಾರಿಯನ್ನು ಡಿ.ಪಿ.ಜೈನ್ ವಹಿಸಿಕೊಂಡಿದ್ದು, ಹೆದ್ದಾರಿ ಕಾಮಗಾರಿಗೆ ಹಣ ಬಿಡುಗಡೆ ಆಗಿದೆ. ಆದರೆ, ಜಿಲ್ಲೆಯ ಹವಾಮಾನದ ಬಗ್ಗೆ ಮಾಹಿತಿ ಇಲ್ಲದೆ ಕಾಮಗಾರಿ ನಿರ್ವಹಿಸಿದ್ದರಿಂದ ಸಮಸ್ಯೆಯಾಗಿ ಬೆಳ್ತಂಗಡಿ ತಾಲ್ಲೂಕಿನ ಜನ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಬಗ್ಗೆ ಶಾಸಕ ಹರೀಶ್ ಪೂಂಜ, ನಾನು ಗುತ್ತಿಗೆದಾರರ ಜತೆಗೆ ಮಾತುಕತೆ ನಡೆಸಿದ್ದು, ಸಫಲವಾಗಲಿಲ್ಲ. ಇದಕ್ಕಾಗಿ ಗುತ್ತಿಗೆದಾರ ಡಿ.ಪಿ.ಜೈನ್, ಹೆದ್ದಾರಿ ಮುಖ್ಯ ಎಂಜಿನಿಯರ್ ಹಾಗೂ ಅಧಿಕಾರಿಗಳ ಜತೆ ಮಾತುಕತೆ ನಡೆಸಿ ಮುಂದಿನ ಹೆದ್ದಾರಿ ಕಾಮಗಾರಿಯನ್ನು ಮೊಗೆರೋಡಿ ಕನ್‌ಸ್ಟ್ರಕ್ಷನ್‌ನವರು ನಿರ್ವಹಿಸುವಂತೆ ನಿರ್ಧರಿಸಲಾಗಿದೆ. ಇದಕ್ಕೆ ಗುತ್ತಿಗೆದಾರ ಡಿ.ಪಿ.ಜೈನ್ ಒಪ್ಪಿಗೆ ನೀಡಿದ್ದಾರೆ’ ಎಂದು ವಿವರಿಸಿದರು.
‘ಪ್ರಥಮ ಹಂತದಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗಿನ ರಸ್ತೆಯ ಹೊಂಡ ಮುಚ್ಚಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು’ ಎಂದು ತಿಳಿಸಿದರು. ರಸ್ತೆಯ ಹೊಂಡಗಳನ್ನು ಮುಚ್ಚುವ ಕೆಲಸಕ್ಕೆ ಕಾಶಿಬೆಟ್ಟು ಬಳಿ ಚಾಲನೆ ನೀಡಲಾಯಿತು. 35 ಕಿ.ಮೀ. ವ್ಯಾಪ್ತಿಯ ಹೆದ್ದಾರಿಯಲ್ಲಿ ಸುಮಾರು 7 ಸ್ಥಳಗಳಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮೊದಲ ಹಂತದಲ್ಲಿ ತಕ್ಷಣ ಈ ಸ್ಥಳಗಳಲ್ಲಿ ಕಾಮಗಾರಿ ನಡೆಯಲಿದೆ. ಇದರ ಬಳಿಕ ಇತರ ಕಾಮಗಾರಿಗಳು ಮುಂದುವರಿಯಲಿವೆ.
ಇದನ್ನೂ ಓದಿ
ಐಶ್ವರ್ಯಾ ರೈ ಜೊತೆ ನಾನು ಡೈವೋರ್ಸ್ ಪಡೆಯಲಿದ್ದೇವೆ – ಅಭಿಷೇಕ್ ಬಚ್ಚನ್ ಡೀಪ್ ಫೇಕ್ ವಿಡಿಯೋ ವೈರಲ್