Connect with us

    BELTHANGADI

    ಪುಂಜಾಲಕಟ್ಟೆ – ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ವಿಧ್ಯಾರ್ಥಿ ಸಾವು…!!

    ಬೆಳ್ತಂಗಡಿ ಅಗಸ್ಟ್ 29: ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಕಾಲೇಜು ವಿಧ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.


    ಮೃತರನ್ನು ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ಮುಹಮ್ಮದ್ ಶಫೀಕ್(20) ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ದ್ವಿತೀಯ ವರ್ಷದ ಬಿಬಿಎ ವಿದ್ಯಾರ್ಥಿಯಾಗಿದ್ದರು.

    ಪುಂಜಾಲಕಟ್ಟೆ ಮೇಲಿನಪೇಟೆ ಶಾರದಾ ಮಂಟಪದ ಬಳಿ ಈ ಅಪಘಾತ ಸಂಭವಿಸಿದ್ದು. ಶಫೀಕ್ ಬೈಕ್ ಮತ್ತು ಮಂಡತ್ಯಾರ್ ತರಕಾರಿ ಅಂಗಡಿಯ ಕೆಲಸಗಾರರಿಬ್ಬರು ಸಂಚರಿಸುತ್ತಿದ್ದ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿದೆ. ಈ ವೇಳೆ ರಸ್ತೆ ಗೆಸೆಯುಲ್ಪಟ್ಟು ಶಫೀಕ್ ಸ್ಥಳದಲ್ಲೆ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೊಂದು ಬೈಕಿನಲ್ಲಿದ್ದವರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
    ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply