DAKSHINA KANNADA
ಬೋಳೂರಿನ ಮಾತಾ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನ ಕ್ಷೇತ್ರಕ್ಕೆ ಬೇಟಿ ನೀಡಿದ ಜನಪ್ರಿಯ ಗಾಯಕ ಶ್ರೀ. ಅಜಯ್ ವಾರಿಯರ್
ಮಂಗಳೂರು: ನಗರದ ಬೋಳೂರಿನಲ್ಲಿರುವ ಶ್ರೀ ಬ್ರಹ್ಮಸ್ಥಾನ ಕ್ಷೇತ್ರಕ್ಕೆ ಖ್ಯಾತ ಬಹುಭಾಷಾ ಹಿನ್ನೆಲೆ ಗಾಯಕ ಅಜಯ್ ವಾರಿಯರ್ ಭೇಟಿ ನೀಡಿದರು.
ಶ್ರೀ ಬ್ರಹ್ಮಸ್ಥಾನ ಕ್ಷೇತ್ರಾಭಿವೃದ್ಧಿ ಸಮಿತಿ ವತಿಯಿಂದ ಅವರನ್ನು ಸ್ವಾಗತಿಸಲಾಯಿತು.ಶ್ರೀ ಕ್ಷೇತ್ರದ ಪೂಜೆಯಲ್ಲಿ ಭಾಗವಹಿಸಿ “ಕೀರ್ತನ ಸೇವೆ” ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತಾ ಅಮೃತಾನಂದಮಯಿ ಸೇವಾಸಮಿತಿಯ ವತಿಯಿಂದ ಅಧ್ಯಕ್ಷರಾದ ಸುರೇಶ್ ಅಮೀನ್ ಸನ್ಮಾನಿಸಿದರು.ಅಮೃತ ವಿದ್ಯಾಲಯಂ ಪ್ರಾಂಶುಪಾಲೆ ಅಕ್ಷತಾ ಶೆಣೈ ನಿರೂಪಣೆ ಮಾಡಿದರು.
ಕ್ಯಾಂಪಸ್ ಡೈರೆಕ್ಟರ್ ಯತೀಶ್ ಬೈಕಂಪಾಡಿ,ದಿಲೀಪ್ ಕುಮಾರ್ ಹಾಗೂ ಅಮ್ಮನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
You must be logged in to post a comment Login