Connect with us

    FILM

    ತಮಿಳಿನ ಖ್ಯಾತ ಹಾಸ್ಯ ನಟ ಮಯಿಲ್‌ಸಾಮಿ ನಿಧನ

    ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಮಯಿಲ್ ಸಾಮಿ ಇಂದು ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು.


    ಮಯಿಲ್‌ಸಾಮಿ ಅವರಿಗೆ ಶನಿವಾರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಅವರನ್ನು ಕುಟುಂಬಸ್ಥರು ಪೋರೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅವರು ಮಾರ್ಗದ ಮಧ್ಯೆಯೇ ಕೊನೆಯುಸಿರೆಳೆದಿದ್ದು, ಬಳಿಕ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.


    ಮಯಿಲ್‌ಸಾಮಿ ಅವರು ಹಲವಾರು ತಮಿಳು ಚಲನಚಿತ್ರಗಳಲ್ಲಿ ಹಾಸ್ಯ ಮತ್ತು ಅನೇಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರು ಸ್ಟ್ಯಾಂಡ್ ಅಪ್ ಹಾಸ್ಯನಟ, ನಿರೂಪಕ, ರಂಗಭೂಮಿ ಕಲಾವಿದರಾಗಿಯೂ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.
    ಇದೀಗ ಮಯಿಲ್‌ಸಾಮಿ ಹಠಾತ್ ನಿಧನಕ್ಕೆ ತಮಿಳು ಚಿತ್ರರಂಗ ಸೇರಿದಂತೆ ಅನೇಕರು ಆಘಾತ ವ್ಯಕ್ತಪಡಿಸಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply