Connect with us

    BELTHANGADI

    ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಆರೋಪಿ ಕೇಶವ ಅರೆಸ್ಟ್….!!

    ಬೆಳ್ತಂಗಡಿ ನವೆಂಬರ್ 14 : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.


    ಬಂಧಿತ ಆರೋಪಿಯನ್ನು ಕೇಶವ (43) ಎಂದು ಗುರುತಿಸಲಾಗಿದೆ. ‌ಆರೋಪಿ ಬಾಲಕಿಯ ಮನೆಯ ಪರಿಚಿತನೇ ಆಗಿದ್ದು, ಆಗಾಗ ಬರುತ್ತಿದ್ದ ಎನ್ನಲಾಗಿದೆ. ಹತ್ತನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿ ಗರ್ಭಿಣಿಯಾದಾಗಲೇ ಮನೆಯವರಿಗೆ ಘಟನೆಯ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply