Connect with us

KARNATAKA

ಋತುಮತಿಯರಾಗುವವರೆಗೂ ಬಾಲಕಿಯರ ಮೇಲೆ ಮುರುಘಾ ಶ್ರೀಗಳಿಂದ ಲೈಂಗಿಕ ದೌರ್ಜನ್ಯ….!!

ಮೈಸೂರು ಅಕ್ಟೋಬರ್ 14: ಚಿರ್ತದುರ್ಗ ಮರುಘಾ ಶ್ರೀಗಳ ಮೇಲೆ ಇದೀಗ ಮತ್ತೊಂದು ಆರೋಪ ಕೇಳಿ ಬಂದಿದ್ದು, ಇದೀಗ ಪೊಕ್ಸೋ ಕಾಯ್ದೆಯಡಿ ಮತ್ತೊಂದು ಪ್ರಕರಣ ದಾಖಲಾಗಿದೆ. ಮೈಸೂರಿನ ನಜರಬಾದ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ ಸಂತ್ರಸ್ಥೆ ಬಾಲಕಿಯ ತಾಯಿ ಮುರುಘಾ ಮಠದ ವಿದ್ಯಾರ್ಥಿನಿಲಯದಲ್ಲಿ ಓದುತ್ತಿದ್ದ ನನ್ನ ಇಬ್ಬರು ಹೆಣ್ಣುಮಕ್ಕಳು ಋತುಮತಿಯರಾಗುವವರೆಗೂ ಶಿವಮೂರ್ತಿ ಮುರುಘಾ ಶರಣರು ಸತತ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಶರಣರು ಸೇರಿ ಏಳು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.


ತನ್ನ ಇಬ್ಬರು ಮಕ್ಕಳನ್ನಷ್ಟೇ ಅಲ್ಲದೆ, ಇನ್ನಿಬ್ಬರ ಮಕ್ಕಳ ಮೇಲೂ ಶರಣರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ‘ ಎಂದು ಮಹಿಳೆಯು ದೂರಿದ್ದಾರೆ. ಹೀಗಾಗಿ 14 ವರ್ಷದ ಇಬ್ಬರು, 15 ವರ್ಷ ಹಾಗೂ 12 ವರ್ಷದ ಒಬ್ಬರು ಸೇರಿ ನಾಲ್ವರು ಬಾಲಕಿಯರನ್ನು ಸಂತ್ರಸ್ತರನ್ನಾಗಿ ಎಫ್‌ಐಆರ್‌ನಲ್ಲಿ ನಮೂದಿಸಲಾಗಿದೆ. ಮಹಿಳೆಯು ಮಠದಲ್ಲೇ ಕೆಲಸ ಮಾಡಿಕೊಂಡಿದ್ದು, ಅಲ್ಲಿಯೇ ಅವರ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅತಿ ಬಡತನದ ಕಾರಣಕ್ಕೆ ತನ್ನ ಮಕ್ಕಳನ್ನೂ ಮಠದ ಶಾಲೆ ಹಾಗೂ ವಸತಿನಿಲಯಕ್ಕೆ ದಾಖಲಿಸಿದ್ದರು. ’ಮಧ್ಯಾಹ್ನದ ಊಟದ ವೇಳೆಯಲ್ಲಿ ಹಾಗೂ ವಸತಿ ನಿಲಯದ ಕಡೆಗೆ ತೆರಳಿದಾಗಷ್ಟೇ ತನ್ನ ಮಕ್ಕಳನ್ನು ನೋಡಲು ಅವಕಾಶ ಸಿಗುತ್ತಿತ್ತು‘ ಎಂದು ತಿಳಿಸಿದ್ದಾರೆ.

ಆರು ವರ್ಷದ ಹಿಂದೆ ಮಹಿಳೆಯು ತನ್ನ ಇಬ್ಬರು ಮಕ್ಕಳನ್ನು ಕ್ರಮವಾಗಿ 3ನೇ ಮತ್ತು 1ನೇ ತರಗತಿಗೆ ಸೇರಿಸಿದ್ದರು. ’ಒಬ್ಬ ಮಗಳನ್ನು 2019ರಲ್ಲಿ ಮತ್ತು ಇನ್ನೊಬ್ಬ ಮಗಳನ್ನು 2020ರ ಕೋವಿಡ್‌ ಅವಧಿಯಲ್ಲಿ ಶರಣರು ಮೊದಲಿಗೆ ಲೈಂಗಿಕ ದೌರ್ಜನ್ಯಕ್ಕೆ ಬಳಸಿಕೊಂಡಿದ್ದರು. ಋತುಮತಿಯರಾಗುವವರೆಗೂ ಶರಣರು ದೌರ್ಜನ್ಯ ಎಸಗಿದ್ದರು ಎಂದು ಮಕ್ಕಳು ತಿಳಿಸಿದ್ದಾರೆ‘ ಎಂದು ಮಹಿಳೆಯು ಆರೋಪಿಸಿದ್ದಾರೆ. ’ವಸತಿ ನಿಲಯದಲ್ಲಿದ್ದ 14 ಮತ್ತು 15 ವರ್ಷ ವಯಸ್ಸಿನ ಇನ್ನಿಬ್ಬರು ಬಾಲಕಿಯರು ಶರಣರಿಂದ ದೌರ್ಜನ್ಯಕ್ಕೆ ಒಳಗಾದ ಬಗ್ಗೆ ಮುಕ್ತವಾಗಿ ಹೇಳಿಕೊಂಡಿದ್ದಾರೆ‘ ಎಂದೂ ಮಹಿಳೆಯರು ಆರೋಪಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *