ಬೆಳ್ತಂಗಡಿ, ಮಾರ್ಚ್ 12: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ನರೇಶ್ (41) ಎಂಬಾತನು ವೇಣೂರು ವ್ಯಾಪ್ತಿಯಲ್ಲಿ ಕೂಲಿ ಕೆಲಸಕ್ಕಾಗಿ ಬಂದಿದ್ದನು. ಮಾ.11 ರಂದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಕುರಿತು ಬಾಲಕಿಯ ಕುಟುಂಬದವರು ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.