Connect with us

    KARNATAKA

    ಜಿಮ್‌ ನಲ್ಲಿ ಮಹಿಳೆಯ ಸಾವು: ಸಾವಿನ ಅಸಲಿ ಕಾರಣ ಬಿಚ್ಚಿಟ್ಟ ಪೋಸ್ಟ್ ಮಾರ್ಟಮ್‌ ರಿಪೋರ್ಟ್..!

    ಬೆಂಗಳೂರು, ಎಪ್ರಿಲ್ 05: ನಗರದ ಬೈಯಪ್ಪನಹಳ್ಳಿ ಜಿಮ್‌ನಲ್ಲಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಕಾರಣವು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಹಿರಂಗವಾಗಿದೆ.

    ಜಿಮ್‌ನಲ್ಲಿ ವರ್ಕ್ ಔಟ್ ಮಾಡುತ್ತಾ ಇರುವಾಗಲೇ ಕುಸಿದು ಬಿದ್ದಿದ್ದ ಯುವತಿ ಸಾವನ್ನಪ್ಪಿದ್ದರು. ಮಂಗಳೂರು ಮೂಲದ ವಿನಯಾ ಕುಮಾರಿ (35) ಜಿಮ್​ನಲ್ಲಿ ಮೃತಪಟ್ಟಿದ್ದರು. ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಯುವತಿ ಸಾವನ್ನಪ್ಪಿದ್ದ ಬಗ್ಗೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಮಾರ್ಚ್ 26 ರಂದು ಘಟನೆ ನಡೆದಿತ್ತು. ಜಿಮ್ ವರ್ಕ್ ಔಟ್ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದ ವಿನಯಾ, ಅವರು ಜಿಮ್​​ನಲ್ಲಿ ಕುಸಿದು ಬೀಳುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ಕೂಡ ರೆಕಾರ್ಡ್ ಆಗಿತ್ತು.

    ಮರಣೋತ್ತರ ಪರೀಕ್ಷೆಯ ವರದಿ ಲಭ್ಯವಾಗಿದ್ದು, ಸಿವಿ ರಾಮನ್ ಆಸ್ಪತ್ರೆ ವೈದ್ಯರು ಪೋಸ್ಟ್ ಮಾರ್ಟಂ ವರದಿ ನೀಡಿದ್ದಾರೆ. ವರದಿಯಂತೆ, ಕೋಮಾದ ಪರಿಣಾಮವಾಗಿ ಸಾವು ಸಂಭವಿಸಿದೆ. ಮೆದುಳಿನ ರಕ್ತನಾಳದ ಛಿದ್ರಗೊಂಡ ಪರಿಣಾಮವಾಗಿ ಸೆರೆಬ್ರಲ್ ಹೆಮರೇಜ್ ಆಗಿದೆ. ಅದರಿಂದ ಯುವತಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

    ಜಿಮ್​ನಲ್ಲಿ ವರ್ಕ್ ಔಟ್ ಮಾಡುತ್ತಿರುವಾಗ ಸಾವನ್ನಪ್ಪುವ ಬಗ್ಗೆ ಹಲವು ಅಭಿಪ್ರಾಯಗಳು ಜನರಲ್ಲಿ ಇವೆ. ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಕೂಡ ಜಿಮ್​ಗೆ ತೆರಳಿದ್ದ ವೇಳೆ ಮೃತಪಟ್ಟಿದ್ದರು. ಆಗಲೂ ಅತಿಯಾದ ವರ್ಕ್ ಔಟ್ ಮಾಡುವ ಬಗ್ಗೆ ಹಲವು ಮಾಹಿತಿಗಳು, ಪ್ರಶ್ನೆಗಳು ಜನರ ಮನಸಲ್ಲಿ ಮೂಡಿತ್ತು. ಈ ಘಟನೆಯೂ ಅದಕ್ಕೆ ಪೂರಕ ಎಂಬಂತೆ ನಡೆದಿತ್ತು.

    ಮಾರ್ಚ್ 26 ರಂದು ಬೈಯಪ್ಪನಹಳ್ಳಿ ಠಾಣಾ ವ್ಯಾಪ್ತಿಯ ಜಿಮ್​ನಲ್ಲಿ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಪೂರ್ವ ವಿಭಾಗ ಡಿಸಿಪಿ ಡಾ. ಭೀಮಾಶಂಕರ್ ಗುಳೇದ ಹೇಳಿಕೆ ನೀಡಿದ್ದಾರೆ. ಯುವತಿ ಜಿಮ್​ನಲ್ಲಿ ವರ್ಕ್ ಔಟ್ ಮಾಡುವ ವೇಳೆ ಭಾರವಾದ ವಸ್ತುವನ್ನು ಲಿಫ್ಟ್ ಮಾಡಿದ್ದಾರೆ. ಈ ವೇಳೆ ರಕ್ತದ ಒತ್ತಡ ಉಂಟಾಗಿ ಮೆದುಳಿನಲ್ಲಿ ಬ್ಲಡ್ ಪ್ರೆಶರ್ ಉಂಟಾಗಿದೆ. ಮೆದುಳಿನಲ್ಲಿ ಒತ್ತಡದಿಂದ ರಕ್ತನಾಳಗಳು ಒಡೆದು, ರಕ್ತಸ್ರಾವವಾಗಿ ಕೋಮಾಗೆ ಹೋಗಿದ್ದಾರೆ. ಬಳಿಕ ಯುವತಿ ಸಾವನ್ನಪ್ಪಿದ್ದಾರೆಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ವೈದ್ಯರು ಉಲ್ಲೇಖಿಸಿದ್ದಾರೆ ಎಂದು ತಿಳಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *