Connect with us

  DAKSHINA KANNADA

  ಇಂದು ನಡೆಯಬೇಕಿದ್ದ ‘ಮಂಗಳೂರು ವಿವಿ ಎಲ್ಲಾ ಪದವಿ ಪರೀಕ್ಷೆ’ ಮುಂದೂಡಿಕೆ

  ಮಂಗಳೂರು, ಮಾರ್ಚ್ 01: ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಕಾರಣ, ಶಾಲಾ-ಕಾಲೇಜುಗಳಿಗೆ ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಗೈರು ಹಾಜರಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳೂರು ವಿವಿಯಿಂದ ಇಂದು ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

  ಈ ಬಗ್ಗೆ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 01-03-2023ರಂದು ಸರ್ಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ, ಈ ದಿನದಂದು ನಡೆಯಬೇಕಿದ್ದ ವಿವಿಯ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲಾಗಿರುವ ಪರೀಕ್ಷೆಗಳ ವೇಳಾಪಟ್ಟಿಯನ್ನು ಶೀಘ್ರದಲ್ಲೇ ತಿಳಿಸಲಾಗುವುದಾಗಿ ಹೇಳಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply