DAKSHINA KANNADA
ಕುಕ್ಕೆ ಸುಬ್ರಹ್ಮಣ್ಯಕ್ಕೆ ಖ್ಯಾತ ನಟ ನಿರ್ದೇಶಕ ಪ್ರಭುದೇವ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ಮಾರ್ಚ್ 15: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಖ್ಯಾತ ನಟ ನಿರ್ದೇಶಕ ಡ್ಯಾನ್ಸರ್ ಪ್ರಭುದೇವ ಭೇಟಿ ನೀಡಿ ದೇವರ ದರ್ಶನ ಪಡೆದರು.
ಪ್ರಭುದೇವ್ ಅವರ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ್ ದಂಪತಿಯನ್ನು ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್, ಮುಂತಾದವರು ಉಪಸ್ಥಿತರಿದ್ದರು.