KARNATAKA
ಲೈಂಗಿಕ ದೌರ್ಜನ್ಯ ಕೇಸ್ ಹಿನ್ನಲೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಸಂಸದ ಪ್ರಜ್ವಲ್ ರೇವಣ್ಣ ಅರೆಸ್ಟ್
ಬೆಂಗಳೂರು ಮೇ 31: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆಸಿ ಅದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದಲ್ಲದೆ ವಿಡಿಯೋ ವೈರಲ್ ಆಗಿದ ಬೆನ್ನಲ್ಲೇ ವಿದೇಶಕ್ಕೆ ತೆರಳಿದ್ದ ಹಾಸನ ಸಂಸದ ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು 35 ದಿನಗಳ ಬಳಿಕ ಎಸ್ ಐಟಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಜರ್ಮನಿಯ ಮ್ಯೂನಿಕ್‌ನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಐಎಬಿ ವಿಮಾನ ನಿಲ್ದಾಣಕ್ಕೆ ಆರೋಪಿ ಬಂದಿಳಿಯುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಎಸ್ಐಟಿ, ಕೆಐಎಬಿ ಹಿಂದಿನ ಗೇಟ್ ಮೂಲಕ ಕರೆದೊಯ್ದಿದ್ದಾರೆ. ಏರ್ಪೋರ್ಟ್ನಿಂದ ಬೆಂಗಳೂರಿನ ಎಸ್ಐಟಿ ಕಚೇರಿಯತ್ತ ಬಿಗಿ ಭದ್ರತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ. ಇತ್ತ ಸಿಐಡಿ ಕಚೇರಿ ಬಳಿ ಪೊಲೀಸರು ಅಲರ್ಟ್ ಆಗಿದ್ದು, ಇಬ್ಬರು ಇನ್ಸ್ ಪೆಕ್ಟರ್ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ.
ಪ್ರಜ್ವಲ್ ವಿರುದ್ಧ ಲುಕ್‌ಔಟ್ ನೋಟಿಸ್ ಇರೋದ್ರಿಂದ ಇಮಿಗ್ರೇಷನ್ ಅಧಿಕಾರಿಗಳೇ ಪ್ರಜ್ವಲ್‌ನನ್ನು ಮೊದಲು ವಶಕ್ಕೆ ಪಡೆದುಕೊಂಡಿದ್ದರು. ಅರೆಸ್ಟ್ ವಾರಂಟ್ ಕೂಡ ಇರೋದ್ರಿಂದ ಎಸ್‌ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.