Connect with us

    KARNATAKA

    ಪ್ರಜ್ವಲ್ ರೇವಣ್ಣಗೆ ಶಾಕ್ ನೀಡಿದ ಹೈಕೋರ್ಟ್ – ಸಂಸದ ಸ್ಥಾನದಿಂದ ಅನರ್ಹ

    ಬೆಂಗಳೂರು ಸೆಪ್ಟೆಂಬರ್ 01: ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ನೀಡಿ ಅಕ್ರಮ ಎಸಗಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ ಮಾಡಿದೆ.

    ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾ.ಕೆ.ನಟರಾಜನ್ ಅವರು ಆದೇಶ ಪ್ರಕಟಿಸಿದ್ದಾರೆ. ಈ ಆದೇಶದಿಂದ ಇನ್ನು 6 ವರ್ಷಗಳ ಕಾಲ ಪ್ರಜ್ವಲ್‌ ರೇವಣ್ಣ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಾಧ್ಯವಿಲ್ಲ. ಪ್ರಜ್ವಲ್ ಸರ್ಕಾರಿ ಜಮೀನು ಖರೀದಿಸಿದ್ದಾರೆ, ಆದಾಯ ತೆರಿಗೆ ವಂಚಿಸಿದ್ದಾರೆ. ಬೇನಾಮಿ ಆಸ್ತಿ ಗಳಿಸಿದ್ದಾರೆ. ಹೊಳೆನರಸೀಪುರದಲ್ಲಿರುವ ಚೆನ್ನಾಂಬಿಕ ಕನ್ವೆನ್ಶನ್‌ ಸೆಂಟರ್ ಕಟ್ಟಡ ಕನಿಷ್ಠ 5 ಕೋಟಿ ರೂ. ಬೆಲೆ ಬಾಳುತ್ತದೆ. ಆದರೆ ಅದರ ಮೌಲ್ಯವನ್ನು 14 ರೂ. ಲಕ್ಷ ಎಂದು ತೋರಿಸಲಾಗಿದೆ. ಬೆಂಗಳೂರಿನ ಮಿನರ್ವ ಸರ್ಕಲ್ ಶಾಖೆಯ ಕರ್ನಾಟಕ ಬ್ಯಾಂಕ್ ಖಾತೆಯಲ್ಲಿ 48 ಲಕ್ಷ ರೂ. ಹೊಂದಿದ್ದರೂ ಕೇವಲ 5 ಲಕ್ಷ ಇದೆ ಎಂದು ತೋರಿಸಿದ್ದಾರೆ ಎಂದು ದೇವರಾಜೇಗೌಡ ಆರೋಪಿದ್ದರು.

     

    ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತರಾಗಿದ್ದ ಹಾಲಿ ಜೆಡಿಎಸ್‌ ಶಾಸಕರಾಗಿರುವ ಎ ಮಂಜು ಹಾಗೂ ಜಿ ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ಅರ್ಜಿಯನ್ನು ನ್ಯಾಯಮೂರ್ತಿ ಕೆ ನಟರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಭಾಗಶಃ ಪುರಸ್ಕರಿಸಿದೆ. ಪ್ರಜ್ವಲ್‌ ಅವರು ಚುನಾವಣಾ ಅಕ್ರಮದಲ್ಲಿ ಭಾಗಿಯಾಗಿರುವುದರಿಂದ ತನ್ನನ್ನು ವಿಜೇತ ಅಭ್ಯರ್ಥಿಯನ್ನಾಗಿ ಘೋಷಿಸಬೇಕು ಎಂಬ ಎ ಮಂಜು ಅವರ ಕೋರಿಕೆಯನ್ನೂ ನ್ಯಾಯಾಲಯವು ತಿರಸ್ಕರಿಸಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *