KARNATAKA
ಬೇಡಣ್ಣ ಬಿಟ್ಟಿಡಿ ಎಂದು ಹಿರಿಯ ವಯಸ್ಸಿನ ಮಹಿಳೆ ಹೇಳಿದರೂ ಬಿಡದೆ ಪ್ರಜ್ವಲ್ ಅ*ತ್ಯಾ*ಚಾ*ರ
ಹಾಸನ ಸೆಪ್ಟೆಂಬರ್ 10: ಬೇಡಣ್ಣ ಬಿಟ್ಟಿಡಿ ಎಂದು ಹಿರಿಯ ವಯಸ್ಸಿನ ಮಹಿಳೆ ಹೇಳಿದರೂ ಬಿಡದೆ ಪ್ರಜ್ವಲ್ ಅತ್ಯಾಚಾರ ಎಸಗಿ, ಅದನ್ನು ಚಿತ್ರೀಕರಿಸಿಕೊಂಡಿದ್ದಾರೆ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದೆ. ತಮ್ಮ ಮನೆಯಲ್ಲಿ ಕೆಲಸದಲ್ಲಿದ್ದ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಮಹಿಳೆ ಮೇಲೆ ಹಾಸನ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ತನಿಖೆಯಲ್ಲಿ ಸಾಬೀತಾಗಿದೆ.
ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೋಮವಾರ 1,652 ಪುಟಗಳ ಆರೋಪಪಟ್ಟಿ ಸಲ್ಲಿಸಿದ ಎಸ್‌ಐಟಿ, ಪ್ರಜ್ವಲ್ ವಿರುದ್ದ ಅತ್ಯಾಚಾರ ಕೃತ್ಯ ರುಜುವಾತಾಗಿದೆ ಎಂದು ಉಲ್ಲೇಖಿಸಿದೆ. ಇದು ಪ್ರಜ್ವಲ್ ವಿರುದ್ಧ ಸಲ್ಲಿಕೆಯಾದ ಎರಡನೇ ಅತ್ಯಾಚಾರ ಪ್ರಕರಣದ ಆರೋಪ ಪಟ್ಟಿಯಾಗಿದೆ. ಆರೋಪ ಪಟ್ಟಿಯಲ್ಲಿ ಮಹಿಳೆ ಹೇಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎನ್ನುವುದನ್ನು ತಿಳಿಸಿದ್ದಾರೆ.
ಬಾಗಿಲ ಚಿಲಕ ತೆಗಿಯಣ್ಣ, ನನಗೆ ಭಯ ಆಗ್ತಿದೆ, ಹೊರಗೆ ಹೋಗ್ತೀನಿ, ನಿನ್ನ ದಮ್ಮಯ್ಯ ಬಾಗಿಲು ತೆಗಿ ಎಂದರೂ ಕೇಳದೆ ನನ್ನ ಮೈಮೇಲಿನ ಬಟ್ಟೆಗಳನ್ನೆಲ್ಲಾ ತೆಗೆಸಿ, ನನ್ನನ್ನು ಬೆತ್ತಲೆಗೊಳಿಸಿ ಬಲವಂತವಾಗಿ ಬೆಡ್ ಮೇಲೆ ಮಲಗಿಸಿ, ನನ್ನ ಮೇಲೆ ನಿಯಂತ್ರಣ ಸಾಧಿಸಿ ಅತ್ಯಾಚಾರ ಮಾಡಿದರು… ಪ್ರಜ್ವಲ್ ಒಂದು ಕೈಯ್ಯಲ್ಲಿ ಮೊಬೈಲ್ ಹಿಡಿದುಕೊಂಡು ಮತ್ತೊಂದು ಕೈಯ್ಯಲ್ಲಿ ಲೈಂಗಿಕ ಕೃತ್ಯ ಎಸಗಿದರು’ ಎಂದು ಸಂತ್ರಸ್ತೆಯು ವಿವರಿಸಿದ್ದಾರೆ. ‘ಬೇಡ ಎಂದರೂ ಕೇಳದೆ ಏನೂ ಆಗೋಲ್ಲ ಎಂದರು. ಮನೆ ಸ್ವಚ್ಛಪಡಿಸುವ ನೆಪದಲ್ಲಿ ಆಗಾಗ್ಗೆ ಕರೆಸಿಕೊಂಡು ಅವರ ತಂದೆ ತಾಯಿ ಇಲ್ಲದ ಸಮಯದಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದರು’ ಎಂದು ಸಂತ್ರಸ್ತೆಯು ವಿವರಿಸಿದ್ದಾರೆ.
ಸದ್ಯ ಪ್ರಜ್ವಲ್ ರೇವಣ್ಣ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಗಾಗಲೇ ಲಭ್ಯ ಸಾಕ್ಷ್ಯಾಧಾರಗಳ ಆಧಾರದಲ್ಲಿ ಈ ದೋಷಾರೋಪ ಪಟ್ಟಿ ಸಲ್ಲಿಸಲಾಗುತ್ತಿದೆ. ವೈದ್ಯಕೀಯ ತಪಾಸಣೆಯ ಸಮಯದಲ್ಲಿ ಕಂಡುಬಂದ ಅಂಶಗಳನ್ನು ಎಫ್‌ಎಸ್‌ಎಲ್ ತಂಡದವರು ತೆಗೆದಿದ್ದ ಫೋಟೊಗಳಲ್ಲಿ ವೈದ್ಯರ ತಂಡ ಗುರುತಿಸಿ ಕೊಟ್ಟಿರುವ ಫೋಟೊಗಳ ಜೊತೆಗೆ ಹೋಲಿಕೆ ಮತ್ತು ವಿಶ್ಲೇಷಣೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಿಕೊಡಲಾಗಿದ್ದು ವರದಿ ಪಡೆಯಬೇಕಾಗಿದೆ’ ಎಂದು ಉಲ್ಲೇಖಿಸಲಾಗಿದೆ.
ಮಂಗಳೂರು : ಜೀವಂತ ಸಾಕು ನಾಯಿಯನ್ನು ಕಸ ವಿಲೇ ವಾಹನಕ್ಕೆ ತುಂಬಿಸಿದ ಮನೆ ಮಾಲಿಕ, ಪ್ರಾಣಿ ಪ್ರಿಯರ ಆಕ್ರೋಶ..!