Connect with us

LATEST NEWS

ರಾಜಕೀಯಕ್ಕೆ ಇಳಿದ ಖ್ಯಾತ ಚಿತ್ರನಟ ಪ್ರಕಾಶ್ ರೈ ಲೋಕಸಭೆ ಚುನಾವಣೆಗೆ ಸ್ಪರ್ಧೆ

ರಾಜಕೀಯಕ್ಕೆ ಇಳಿದ ಖ್ಯಾತ ಚಿತ್ರನಟ ಪ್ರಕಾಶ್ ರೈ ಲೋಕಸಭೆ ಚುನಾವಣೆಗೆ ಸ್ಪರ್ಧೆ

ಬೆಂಗಳೂರು: ಜಸ್ಟ್ ಆಸ್ಕಿಂಗ್ ಮೂಲಕ ಕೇಂದ್ರ ಸರಕಾರ ಹಾಗೂ ಸಂಘ ಪರಿವಾರ ಹಾಗೂ ಬಿಜೆಪಿಯನ್ನು ಟೀಕಿಸುತ್ತಿದ್ದ ಖ್ಯಾತ ನಟ ಪ್ರಕಾಶ್ ರೈ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ನಟ ಪ್ರಕಾಶ್ ರೈ ಘೋಷಿಸಿದ್ದಾರೆ.

ಹೊಸ ವರ್ಷದ ಸಂದರ್ಭದಲ್ಲಿ, ಸೋಮವಾರ ಮಧ್ಯರಾತ್ರಿ ಟ್ವೀಟ್ ಮಾಡಿರುವ ಅವರು, ‘ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಒಂದು ಹೊಸ ಆರಂಭ. ಹೆಚ್ಚಿನ ಜವಾಬ್ದಾರಿ. ನಿಮ್ಮ ಬೆಂಬಲದೊಂದಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ. ಸ್ಪರ್ಧಿಸಲಿರುವ ಕ್ಷೇತ್ರದ ಕುರಿತ ಮಾಹಿತಿಯನ್ನು ಶೀಘ್ರದಲ್ಲೇ ನೀಡಲಿದ್ದೇನೆ. ಆಬ್‌ ಕಿ ಬಾರ್ ಜನತಾ ಕಿ ಸರ್ಕಾರ್ ಎಂದು ಟ್ವೀಟ್ ಮಾಡಿದ್ದಾರೆ.

ಈಗಾಗಲೇ ತಮಿಳುನಾಡಿನಲ್ಲಿ ರಜನಿಕಾಂತ್, ಕಮಲಹಾಸನ್ ಈಗಾಗಲೇ ರಾಜಕೀಯಕ್ಕೆ ಧುಮುಕಿದ್ದಾರೆ. ಇಬ್ಬರ ನಂತರ ಸಕ್ರಿಯ ರಾಜಕೀಯಕ್ಕೆ ಧುಮುಕುತ್ತಿರುವ ಮೂರನೇ ಪ್ರಮುಖ ನಟ ಪ್ರಕಾಶ್ ರೈ.

Facebook Comments

comments