FILM
ನೋಡ್ರಪ್ಪ… ನಿಮ್ ಮಾಮನೊ.. ನಿಮ್ ಅತ್ತೇನೊ.. ಪ್ರಜೆಗಳ 30% ಕೊಳ್ಳೆ ಹೊಡೆಯೊಕ್ ಬಿಡ್ಬೀಡಿ – ಪ್ರಕಾಶ್ ರೈ

ಬೆಂಗಳೂರು ಎಪ್ರಿಲ್ 06: ಕಿಚ್ಚ ಸುದೀಪ್ ಸಿಎಂ ಬೊಮ್ಮಾಯಿವರಿಗೆ ನನ್ನ ಬೆಂಬಲ ಎಂದು ಘೋಷಿಸಿದ ಬೆನ್ನಲ್ಲೆ ಹಿರಿಯ ನಟ ಪ್ರಕಾಶ್ ರೈ ಸುದೀಪ್ ವಿರುದ್ದ ಅಸಮಧಾನ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿದ್ದಾರೆ.
ಸರಣಿ ಟ್ವೀಟ್ಗಳನ್ನು ಮಾಡಿರುವ ಪ್ರಕಾಶ್ ರಾಜ್, ಸುದೀಪ್.. ಒಬ್ಬ ಮೇರು ಕಲಾವಿದನಾಗಿ ಸಮಾಜದ ಎಲ್ಲ ವರ್ಗದ ಪ್ರೀತಿಯಿಂದ ಬೆಳೆದ ನೀವು, ಜನ ಸಾಮಾನ್ಯನ ದನಿಯಾಗುವಿರಿ ಎಂದು ಆಶಿಸಿದ್ದೆ. ಆದರೆ ತಾವು ಒಂದು ರಾಜಕೀಯ ಪಕ್ಷದ ಬಣ್ಣ ಬಳಿದುಕೊಳ್ಳುತ್ತೀರಿ ಎಂದು ನಿರೀಕ್ಷಿಸಿರಲ್ಲ.. ಇನ್ನು ಮುಂದೆ ನಿಮ್ಮನ್ನೂ, ನಿಮ್ಮ ಪಕ್ಷವನ್ನು ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ ಎಂದು ಒಂದು ಟ್ವೀಟ್ ಮಾಡಿದ್ದಾರೆ.

ಇನ್ನೊಂದು ಟ್ವೀಟ್ನಲ್ಲಿ ‘ನೋಡ್ರಪ್ಪ… ನಿಮ್ ಮಾಮನೊ.. ನಿಮ್ ಅತ್ತೇನೊ.. ನಿಮ್ ಕಷ್ಟಕಾಲದಲ್ಲಿ ಸಹಾಯ ಮಾಡಿದ್ರೆ.. ನೀವು ದುಡಿದಿದ್ರಲ್ಲಿ 10%.. 20% ಇಲ್ಲ 30 % ಕೊಡಿ.. ಅದು ನಿಮ್ಮಿಷ್ಟ .. ಆದ್ರೆ .. ಪ್ರಜೆಗಳ 30% ಕೊಳ್ಳೆ ಹೊಡೆಯೊಕ್ ಬಿಡ್ಬೀಡಿ .. ಅಷ್ಟೆ..ಅಷ್ಟೇ #justasking ಎಂದು ಕಿಚಾಯಿಸಿದ್ದಾರೆ.
ಇನ್ನು, ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂದು ಸುದ್ದಿಯಾಗುತ್ತಿದ್ದಂತೆಯೇ ನಿನ್ನೆ ಟ್ವೀಟ್ ಮಾಡಿದ್ದ ಪ್ರಕಾಶ್ ರಾಜ್, ‘ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ BJP ಹರಡುತ್ತಿರುವ ಸುಳ್ಳುಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’ ಎಂದು ಟ್ವೀಟ್ ಮಾಡಿದ್ದರು.
ಪ್ರಕಾಶ್ ರಾಜ್ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಕಿಚ್ಚ ಸುದೀಪ್, ನಾನು ಪ್ರಕಾಶ್ ರಾಜ್ ಅವರ ಜೊತೆ ರನ್ನ ಮೂವಿ ಮಾಡಿದ್ದೇನೆ. ಅವರ ಜೊತೆ ಮುಂದಿನ ಸಿನಿಮಾ ಮಾಡೋಕೂ ಕಾಯುತ್ತಿದ್ದೇನೆ. ಪ್ರಕಾಶ್ ರಾಜ್ ಒಳ್ಳೆಯ ವ್ಯಕ್ತಿ. ಅವರ ಮೇಲೆ ನನಗೆ ಗೌರವ ಇದೆ. ಒಳ್ಳೆಯ ಕಲಾವಿದ ಎಂದಿದ್ದರು.