LATEST NEWS
ಸಚಿವೆ ಜಯಮಾಲಾ ಅಂದವನ್ನು ಬಾಯಿತುಂಬಾ ಹೊಗಳಿದ ಪ್ರಮೋದ್ ಮಧ್ವರಾಜ್

ಸಚಿವೆ ಜಯಮಾಲಾ ಅಂದವನ್ನು ಬಾಯಿತುಂಬಾ ಹೊಗಳಿದ ಪ್ರಮೋದ್ ಮಧ್ವರಾಜ್
ಉಡುಪಿ ಅಗಸ್ಟ್ 30: ಸ್ಥಳೀಯ ಸಂಸ್ಥೆಗಳ ಪ್ರಚಾರದಲ್ಲಿರುವ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಅವರ ಅಂದವನ್ನು ಮಾಜಿ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೊಗಳಿದ್ದಾರೆ.
ಸ್ಥಳೀಯ ಚುನಾವಣೆ ಪ್ರಚಾರದಲ್ಲಿ ಜಯಮಾಲಾ ಗಾಳಿ ಎದ್ದಿದೆ. ಜಯಮಾಲಾರಷ್ಟು ಗ್ಲಾಮರ್ ಯಾರಿಗಿದೆ ಹೇಳಿ? ಶಿ ಈಸ್ ವೆರಿ ಗ್ಲ್ಯಾಮರಸ್ ಡಿಸ್ಟ್ರಿಕ್ಟ್ ಮಿನಿಸ್ಟರ್ ಎಂದು ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಜಯಮಾಲಾರನ್ನು ಹೊಗಳಿದ್ದಾರೆ.

ಚುನಾವಣೆಗೆ ಜಿಲ್ಲೆಯಾದ್ಯಂತ ಹೆಚ್ಚು ಓಡಾಟ ನಡೆಸದಿದ್ದರೂ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಜಯಮಾಲಾ ಗಾಳಿ ಎದ್ದಿದೆ. ಒಂದೇ ದಿನದ ಪ್ರಚಾರವೇ ಸಾಕಷ್ಟು ಪರಿಣಾಮ ಬೀರಿದೆ. ಜಯಮಾಲಾ ನನಗಿಂತ ಹೆಚ್ಚಾಗಿ ಗ್ಲಾಮರ್ ಇದೆ ಎಂದು ಹೇಳಿದರು.