Connect with us

    LATEST NEWS

    ಪ್ರಮೋದ್ ಮಧ್ವರಾಜ್ ರಾಜ್‌ ಫಿಶ್‌ಮೀಲ್‌ ಕಂಪೆನಿ ವಿರುದ್ದ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್..!!

    ಬೆಂಗಳೂರು ಸೆಪ್ಟೆಂಬರ್ 21:ಕಾಂಗ್ರೆಸ್‌ ಮುಖಂಡ ಪ್ರಮೋದ್‌ ಮಧ್ವರಾಜ್‌ ಅವರು ಪಾಲುದಾರರಾಗಿರುವ ರಾಜ್‌ ಫಿಶ್‌ಮೀಲ್‌ ಮತ್ತು ಆಯಿಲ್‌ ಕಂಪೆನಿಯ ವಿರುದ್ದ ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕದೋರ್ಟ್ ವಜಾ ಮಾಡಿದ್ದು, ಅರ್ಜಿದಾರರಿಗೆ 10 ಲಕ್ಷ ರೂಪಾಯಿ ದಂಡ ನೀಡುವಂತೆ ಆದೇಶಿಸಿದೆ.


    ಪ್ರಮೋದ್ ಮಧ್ವರಾಜ್ ಒಡೆತನದ ರಾಜ್ ಫಿಶ್ ಮೀಲ್ ಮತ್ತು ಆಯಿಲ್ ಕಂಪೆನಿ ಕೊಳೆತ ಮೀನುಗಳು ಮತ್ತು ತ್ಯಾಜ್ಯವನ್ನು ನದಿಗೆ ಹರಿಯಬಿಡುವ ಮೂಲಕ ಪರಿಸರಕ್ಕೆ ಹಾನಿ ಮಾಡುವ ಚಟುವಟಿಕೆಯಲ್ಲಿ ತೊಡಗಿದೆ. ಈ ಸಂಸ್ಥೆಯ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಕೋರಿ ಪ್ರಶಾಂತ್‌ ಅಮಿನ್‌ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರಿದ್ದ ವಿಭಾಗೀಯ ಪೀಠವು ಅರ್ಜಿದಾರ ಪ್ರಶಾಂತ್‌ ಅಮಿನ್‌ ಅವರು ವೈಯಕ್ತಿಕ ಹಿತಾದೃಷ್ಟಿಯಿಂದ ಮನವಿ ಸಲ್ಲಿಸಿದ್ದಾರೆ ಎಂದು ಹೇಳಿದೆ.


    ಅರ್ಜಿದಾರ ಪ್ರಶಾಂತ್‌ ಅಮಿನ್‌ ಅವರು ರಾಜ್‌ ಫಿಶ್‌ಮೀಲ್‌ ಮತ್ತು ಆಯಿಲ್‌ ಕಂಪೆನಿ ಜೊತೆ ವ್ಯವಹಾರ ಹೊಂದಿದ್ದು, ಕಂಪೆನಿಗೆ ಅರ್ಜಿದಾರರು ಮೀನು ಪೂರೈಕೆ ಮಾಡುತ್ತಿದ್ದರು. 2013-14 ಮತ್ತು 2020-21ರ ಅವಧಿಯಲ್ಲಿ ಕಂಪೆನಿಯು ಅರ್ಜಿದಾರರಿಗೆ 95 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ಆಗಿಂದಾಗ್ಗೆ ಪಾವತಿ ಮಾಡಿದೆ. ಕಂಪೆನಿ ಮತ್ತು ಅರ್ಜಿದಾರರ ನಡುವೆ ಒಪ್ಪಂದ ಮುರಿದ ಬಿದ್ದಾಗ ಅರ್ಜಿದಾರರು ಪಿಐಎಲ್‌ ಸಲ್ಲಿಸಿದ್ದು, ಇರದಲ್ಲಿ ಕಂಪೆನಿಯು ಸಾವನ್ನಪ್ಪಿದ ಮೀನು ಮತ್ತು ತ್ಯಾಜ್ಯವನ್ನು ನದಿಗೆ ಹರಿಯ ಬಿಟ್ಟು ನೀರು ಕಲುಷಿತಗೊಳಿಸುವುದರ ಜೊತೆಗೆ ಪರಿಸರಕ್ಕೆ ಹಾನಿ ಉಂಟು ಮಾಡಿದೆ ಎಂದು ದೂರಿದ್ದಾರೆ. ಈ ಸಂಬಂಧ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅನುಸರಣಾ ವರದಿ ಸಲ್ಲಿಸಿದ್ದು, ಕಂಪೆನಿಯ ಬಗ್ಗೆ ಯಾವುದೇ ಆಪಾದನೆ ಮಾಡಿಲ್ಲ ಎಂದು ನ್ಯಾಯಾಲಯ ಹೇಳಿತು.

    ಕಂಪೆನಿಯ ಜೊತೆ ವ್ಯವಹಾರ ಹೊಂದಿದ್ದರೂ ವಾಸ್ತವಿಕ ಅಂಶಗಳನ್ನು ಬಚ್ಚಿಟ್ಟು ಅರ್ಜಿದಾರರು ಸಾರ್ವಜನಿಕ ಹಿತಾಸಕ್ತಿ ಮನವಿ ಸಲ್ಲಿಸಿದ್ದಾರೆ. ಇದರಿಂದ ಇದು ಪಿಐಎಲ್‌ ಅಲ್ಲ, ಬದಲಿಗೆ ವೈಯಕ್ತಿಕ ಹಿತಾಸಕ್ತಿ ಅರ್ಜಿ ಎಂಬುದು ನ್ಯಾಯಾಲಯದ ಗಮನಕ್ಕೆ ಬಂದಿದೆ. ಅರ್ಜಿದಾರರು ನ್ಯಾಯಾಲಯದ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದು ಸಾಬೀತಾಗಿದೆ. ಹೀಗಾಗಿ, ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ವಕೀಲರ ಗುಮಾಸ್ತರ ಕಲ್ಯಾಣ ನಿಧಿಗೆ ಉದ್ಯಮಿಯಾಗಿರುವ ಅರ್ಜಿದಾರ ಅಮಿನ್‌ ಅವರು ಒಂದು ತಿಂಗಳ ಒಳಗಾಗಿ 10 ಲಕ್ಷ ರೂಪಾಯಿ ದಂಡದ ಮೊತ್ತವನ್ನು ಪಾವತಿ ಮಾಡಬೇಕು. ಇಲ್ಲವಾದರೆ ಉಡುಪಿ ಜಿಲ್ಲಾಧಿಕಾರಿಯು ಅರ್ಜಿದಾರರಿಂದ ದಂಡ ವಸೂಲಿ ಮಾಡಿ ವಕೀಲರ ಗುಮಾಸ್ತರ ಕಲ್ಯಾಣ ನಿಧಿಗೆ ಜಮೆ ಮಾಡಬೇಕು. ಈ ಸಂಬಂಧ ಅನುಸರಣಾ ವರದಿಯನ್ನು ರಿಜಿಸ್ಟ್ರಾರ್‌ ಜನರಲ್‌ಗೆ ಸಲ್ಲಿಸಬೇಕು. ಈ ಮೂಲಕ ಪಿಐಎಲ್‌ ಅನ್ನು ವಜಾ ಮಾಡಲಾಗಿದೆ ಎಂದು ಪೀಠ ಆದೇಶ ಮಾಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply