LATEST NEWS
ಉಡುಪಿ ಶ್ರೀಕೃಷ್ಣ ಮಠ ಸ್ವಾಧೀನಕ್ಕೆ ಕಾಂಗ್ರೇಸ್ ಸರಕಾರ ಮುಂದಾಗಿತ್ತು – ಪ್ರಮೋದ್ ಮಧ್ವರಾಜ್

ಉಡುಪಿ ಡಿಸೆಂಬರ್ 24: ಉಡುಪಿ ಶ್ರೀಕೃಷ್ಣ ಮಠವನ್ನು ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರ ಮುಂದಾಗಿತ್ತು, ಆದರೆ ಶ್ರೀ ಕೃಷ್ಣ ಮಠಕ್ಕೆ ತೊಂದರೆಯಾದರೆ ಮೊದಲು ನಾನೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಅಂತ ಹೇಳಿದ್ದೆ ಎಂದು ಕಾಂಗ್ರೆಸ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಪ್ರಯುಕ್ತ ನಡೆಯುತ್ತಿರುವ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಮಾತನಾಡಿದ ಅವರು ನಮ್ಮದೇ ಸರ್ಕಾರ ಇದನ್ನು ವಶಪಡಿಸಲು ಮುಂದಾಗಿತ್ತು. ಆಗ ನಾನು ಮಠವನ್ನು ಮುಟ್ಟಿದರೆ ರಾಜೀನಾಮೆ ನೀಡುತ್ತೇನೆ ಎಂದು ಸಿದ್ದರಾಮಯ್ಯನವರಿಗೆ ಹೇಳಿ ಈ ವಿಚಾರಕ್ಕೆ ಫುಲ್ ಸ್ಟಾಪ್ ಹಾಕುವ ಮೂಲಕ ಶಾಸಕನಾಗಿ ಸಣ್ಣ ಸೇವೆ ಮಾಡಿದ್ದೇನೆ ಎಂಬ ತೃಪ್ತಿ ಇದೆ ಎಂದು ಹೇಳಿ ನೆನಪಿಸಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ಜೊತೆ ಅಂತರ ಕಾಯ್ದುಕೊಂಡಿರುವ ಪ್ರಮೋದ್ ಮಧ್ವರಾಜ್, ಪದ್ಮ ಪ್ರಶಸ್ತಿ ನೀಡುವ ಸಂದರ್ಭ ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ್ದರು. ಆಗಲೂ ರಾಜಕೀಯ ವಲಯದಲ್ಲಿ ಚರ್ಚೆಗೆ ಈಡಾಗಿದ್ದರು. ಈಗ ಮತ್ತೆ ತಮ್ಮ ಕಾಂಗ್ರೆಸ್ ಸರ್ಕಾರದ ನಡೆಯನ್ನು ಕೆದಕುವ ಮೂಲಕ ಸುದ್ದಿಯಾಗಿದ್ದಾರೆ.