Connect with us

    LATEST NEWS

    ನಗರಗಳು ವ್ಯವಸ್ಥಿತವಾಗಿ ಅಭಿವೃದ್ದಿಯಾಗಬೇಕು- ಪ್ರಮೋದ್

    ನಗರಗಳು ವ್ಯವಸ್ಥಿತವಾಗಿ ಅಭಿವೃದ್ದಿಯಾಗಬೇಕು- ಪ್ರಮೋದ್

    ಉಡುಪಿ, ಮಾರ್ಚ್ 17: ನಗರ ಪ್ರದೇಶಗಳು ವ್ಯವಸ್ಥಿತವಾಗಿ ಅಭಿವೃದ್ದಿಯಾಗಬೇಕು ಇಲ್ಲವಾದಲ್ಲಿ ಮುಂದಿನ ಪೀಳಿಗೆಗೆ ಭವಿಷ್ಯದಲ್ಲಿ ತೊಂದರೆಯಾಗಲಿದೆ ಎಂದು ರಾಜ್ಯದ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

    ಅವರು ಮಂಗಳವಾರ ಆದಿಉಡುಪಿಯಲ್ಲಿ , 25 ಸೆಂಟ್ಸ್ ಜಾಗದಲ್ಲಿ, 1 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದರು.

    ನಗರ ಪ್ರದೇಶಗಳು ವ್ಯವಸ್ಥಿತವಾಗಿ ಅಭಿವೃದ್ಧಿಯಾಗಬೇಕಾದರೆ , ಭವಿಷ್ಯದ ದೃಷ್ಠಿಯಿಂದ ಕೆಲವು ಕಠಿಣ ಕಾನೂನುಗಳನ್ನು ಜಾರಿಗೆ ತರಲೇ ಬೇಕು, ಸಾರ್ವಜನಿಕರು ಈ ಕಾನೂನುಗಳನ್ನು ಉಲ್ಲಂಘಸಿದೇ ಪ್ರಾಧಿಕಾರಗೊಂದಿಗೆ ಸಹಕರಿಸಬೇಕು , ಸಾರ್ವಜನಿಕರು ಮತ್ತು ಅಭಿವೃದ್ದಿ ಪ್ರಾಧಿಕಾರಗಳು ಸಮತೋಲನದಿಂದ ಅಭಿವೃದ್ದಿ ಕಾರ್ಯದಲ್ಲಿ ಮುನ್ನಡೆಯಬೇಕು ಎಂದು ಸಚಿವರು ಹೇಳಿದರು.

    ಕಳೆದ 4 ವರ್ಷಗಳಲ್ಲಿ ಉಡುಪಿಯಲ್ಲಿ, ನಗರಾಭಿವೃದ್ದಿ ಪ್ರಾಧಿಕಾರದಿಂದ 6 ಕೋಟಿ ರೂ ವೆಚ್ಚದಲ್ಲಿ 22 ಕೆರೆಗಳನ್ನು ಪುನರುಜ್ಜೀವನಗೊಳಿಸಿದ್ದು, ಇದರಿಂದ ನಗರ ಪ್ರದೇಶದಲ್ಲಿ ಅಂರ್ತಜಲ ಮಟ್ಟ ಹೆಚ್ಚಲು ಸಹಕಾರಿಯಾಗಿದೆ, ಅಲ್ಲದೇ 2.5 ಕೋಟಿ ರೂ ವೆಚ್ಚದಲ್ಲಿ ನಾಲ್ಕು ಪಾರ್ಕ್ ಗಳನ್ನು ನಿರ್ಮಿಸಿದ್ದು ಇದರಿಂದ ನಗರದ ಸೌಂದರ್ಯ ಹೆಚ್ಚಾಗಿದೆ, 50 ಲಕ್ಷ ರೂ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಸೇರಿದಂತೆ ಒಟ್ಟು 10 ಕೋಟಿ ರೂ ಗಳಿಗೆ ಮಿಕ್ಕಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿದ್ದು, ಜನರ ತೆರಿಗೆಯ ಹಣ ಪೋಲಾಗದಂತೆ ಕಾರ್ಯ ನಿರ್ವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.

    ಸರ್ಕಾರ ಜನರ ಸೇವೆಗೆ ಬದ್ದವಾಗಿದ್ದು, ಸರ್ಕಾರಿ ಕಚೇರಿಗಳು ಸಹ ಜನ ಸೇವೆಗೆ ಇವೆ, ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರು ಸಂತೋಷದಿಂದ ಬಂದು , ಸಂತೋಷದಿಂದ ಹೋಗುವಂತಹ ವಾತಾವರಣ ನಿರ್ಮಾಣವಾಗಬೇಕು, ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯ ನಿರ್ವಹಿಸಬೇಕು ಎಂದು ಸಚಿವರು ಹೇಳಿದರು.

    ಕಾರ್ಯಕ್ರಮದಲ್ಲಿ ರಾಜ್ಯ ಅಲ್ಪ ಸಂಖ್ಯಾತರ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ ಎ. ಗಫೂರ್, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ, ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ಧನ ತೋನ್ಸೆ, ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಸದಸ್ಯರಾದ ವಯಲಟ್ ಡಿಸೋಜಾ, ರಮೇಶ್ ಕಾಂಚನ್, ಪ್ರವೀಣ್ ಶೆಟ್ಟಿ, ಗಿರೀಶ್ , ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಟಿ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply