Connect with us

    KARNATAKA

    ಮೂರ್ತಿ ಪೂಜೆ ಮಾಡಲು ಹೋರಟ ತನ್ವೀರ್ ಸೇಠ್‌ನನ್ನು ಮುಸ್ಲಿಮರೇ ಗಲ್ಲಿಗೇರಿಸುತ್ತಾರೆ – ಪ್ರಮೋದ್ ಮುತಾಲಿಕ್

    ಹುಬ್ಬಳ್ಳಿ ನವೆಂಬರ್ 11: ಮೈಸೂರಿನಲ್ಲಿ ಟಿಪ್ಪುವಿನ 100 ಅಡಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುತ್ತೇವೆಂಬ ಶಾಸಕ ತನ್ವೀರ್ ಸೇಠ್ ಹೇಳಿಕೆಯ ವಿರುದ್ದ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ,


    ಮುಸ್ಲಿಂ ಸಮುದಾಯದಲ್ಲಿ ಮೂರ್ತಿ ಪೂಜೆ ಇಲ್ಲ ಅದು ಹೇಗೆ ನೀವು ಟಿಪ್ಪು ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೀರಿ? ಇದು ಧರ್ಮ ವಿರೋಧಿ ಹೇಳಿಕೆ ಹೀಗಾಗಿ ಸೇಠ್ ವಿರುದ್ಧ ಫತ್ವಾ ಹೊರಡಿಸಬೇಕು. ಈ ರೀತಿ ಹೇಳಿಕೆ ನೀಡಿದ್ದ ತನ್ವೀರ್ ಸೇಠ್‌ನನ್ನು ಮುಸ್ಲಿಮರೇ ಗಲ್ಲಿಗೇರಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ.

    ಒಂದು ವೇಳೆ ಮೈಸೂರಿನಲ್ಲಿ ಟಿಪ್ಪು ಮೂರ್ತಿ ಪ್ರತಿಷ್ಠಾಪನೆ ಮಾಡಿದರೆ, ನಾವು ಧ್ವಂಸ ಮಾಡುತ್ತೇವೆ. ಭಾರತ ಮತ್ತು ಪಾಕಿಸ್ತಾನ ಧರ್ಮದ ಆಧಾರದಲ್ಲಿ ಬೇರೆಯಾದ ರಾಷ್ಟ್ರಗಳು, ಪಾಕಿಸ್ತಾನ ಹೇಗೆ ಮುಸ್ಲಿಂರಿಗೆ ಸೀಮಿತವೋ, ಹಾಗೆ ಭಾರತ ಹಿಂದೂ ರಾಷ್ಟ್ರ. ಸಂವಿಧಾನದಲ್ಲಿ ಬಲವಂತವಾಗಿ ಜಾತ್ಯಾತೀತ ಶಬ್ದ ಸೇರಿಸಲಾಗಿದೆ. ಇದನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply