LATEST NEWS
ಧೀರ್ಘ ಕೋಮಾ ಸ್ಥಿತಿಗೆ ತಲುಪಿದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ನವದೆಹಲಿ ಅಗಸ್ಟ್ 22: ಮೆದುಳಿನ ಶಸ್ತ್ರಚಿಕಿತ್ಸೆ ಬಳಿಕ ಚಿಂತಾಜನಕ ಸ್ಥಿತಿಗೆ ತಲುಪಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡು ಬಂದಿಲ್ಲ ಎಂದು ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆ ಗುರುವಾರ ತಿಳಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಆಸ್ಪತ್ರೆ ಮೂಲಗಳು ಪ್ರಣವ್ ಅವರ ಸ್ಥಿತಿಯಲ್ಲಿ ಏನೂ ಸುಧಾರಣೆಯಾಗಿಲ್ಲ. ಅವರು ದೀರ್ಘ ಕೋಮಾ ಸ್ಥಿತಿಯಲ್ಲಿದ್ದಾರೆ. ಉಸಿರಾಟ ವ್ಯವಸ್ಥೆಯ ಸುಧಾರಣೆಗಾಗಿ ಚಿಕಿತ್ಸೆ ನಡೆಯುತ್ತಿದೆ. ಸದ್ಯ ಅವರು ವೆಂಟಿಲೇಟರ್‌ನಲ್ಲೇ ಇದ್ದಾರೆ ಎಂದು ತಿಳಿಸಿದ್ದಾರೆ.
ಮಿದುಳಿನಲ್ಲಿ ಹೆಪ್ಪುಗಟ್ಟಿದ ರಕ್ತವನ್ನು ತೆಗೆಯುವ ಶಸ್ತ್ರಚಿಕಿತ್ಸೆಗಾಗಿ ಪ್ರಣವ್ ಮುಖರ್ಜಿ ಅವರು ಅಗಸ್ಟ 10ರಂದು ದೆಹಲಿಯ ಆರ್ಮಿ ರಿಸರ್ಚ್ ಅ್ಯಂಡ್ ರೆಫೆರಲ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ವೈರಸ್ ಸೋಂಕು ಇರುವುದು ದೃಢವಾಗಿತ್ತು. ಈ ವಿಚಾರವನ್ನು ಸ್ವತಃ ಪ್ರಣವ್ ಮುಖರ್ಜಿ ಅವರೇ ಟ್ವೀಟ್ ಮಾಡಿ ತಿಳಿಸಿದ್ದರು. ಶಸ್ತ್ರಚಿಕಿತ್ಸೆಯ ನಂತರ ಪ್ರಣವ್ ಅವರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದೆ. ಅವರ ಆರೋಗ್ಯದ ಮೇಲೆ ತಜ್ಞ ವೈದ್ಯರ ತಂಡ ತೀವ್ರ ನಿಗಾ ಇರಿಸಿದೆ. ಪ್ರಣವ್ ಮುಖರ್ಜಿ ಅವರು 2012ರಿಂದ 2017ರ ವರೆಗೆ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.