LATEST NEWS
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ ಸುದ್ದಿ ಸುಳ್ಳು….!!

ನವದೆಹಲಿ ಅಗಸ್ಟ್ 13: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ವಿಧಿವಶರಾಗಿದ್ದಾರೆ #ripPranabMukherjee ಎಂದು ಹ್ಯಾಷ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ. ಪ್ರಣವ್ ಮುಖರ್ಜಿ ಇನ್ನಿಲ್ಲ ಎಂಬ ವಿಷಯ ಟ್ವಿಟರ್‌ನಲ್ಲಿ ಟ್ರೆಂಡ್ ಆಗುತ್ತಿದ್ದಂತೆ ಪ್ರಣವ್ ಮುಖರ್ಜಿ ಪುತ್ರ ಅಭಿಜಿತ್ ಬ್ಯಾನರ್ಜಿ ನಮ್ಮ ಅಪ್ಪ ಇನ್ನೂ ಬದುಕಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಟ್ವೀಟಿಸಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಸ್ಥಿತಿ ಇನ್ನೂ ಗಂಭೀರವಾಗಿದ್ದು, ಅವರಿಗೆ ಜೀವರಕ್ಷಕ ಸಾಧನಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಣಬ್ ಅವರ ಮಗ ಅಭಿಜಿತ್ ಮುಖರ್ಜಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಣಬ್ ಮುಖರ್ಜಿ ಅವರು ಸಾವನಪ್ಪಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದ್ದು, ಇದು ಸಂಪೂರ್ಣ ಸುಳ್ಳು ಸುದ್ದಿ ಎಂದು ತಿಳಿಸಿದ ಅವರು ನಮ್ಮ ತಂದೆ ಇನ್ನೂ ಜೀವಂತವಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ದೇಶದ ಪ್ರತಿಷ್ಠಿತ ಪತ್ರಕರ್ತರು ಸುಳ್ಳು ಸುದ್ದಿ ಹರಡಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.