FILM
ಹೆಣ್ಣು ಮಗುವಿನ ತಾಯಿಯಾದ ನಟಿ ಪ್ರಣೀತಾ….!!

ಮುಂಬೈ ಜೂನ್ 11: ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಹೆಣ್ಣು ಮಗುವಿಗೆ ತಾಯಿಯಾಗಿದ್ದಾರೆ. . ಸಾಮಾಜಿಕ ಮಾಧ್ಯಮದಲ್ಲಿ ಈ ಖುಷಿ ವಿಚಾರವನ್ನು ಹಂಚಿಕೊಂಡಿದ್ದಾರೆ.
ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಭಾಷೆಯ ಚಿತ್ರಗಳಲ್ಲಿ ನಟಿಸಿರುವ ಪ್ರಣೀತಾ, ಕಳೆದ ವರ್ಷ ಮೇನಲ್ಲಿ ಉದ್ಯಮಿ ನಿತಿನ್ ರಾಜು ಜೊತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಇಂದು ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ನಟಿ ಪ್ರಣಿತಾ ಹೆಣ್ಣು ಮಗುವಿಗೆ ತಾಯಿಯಾಗಿದ್ದಾರೆ. ಆಸ್ಟರ್ ಆರ್‌ವಿ ಆಸ್ಪತ್ರೆಯಲ್ಲಿ ಪ್ರಣಿತಾ ಹೆರಿಗೆಯಾಗಿದ್ದು, ಇಬ್ಬರು ಆರೋಗ್ಯವಾಗಿದ್ದಾರೆ. ಈ ಕುರಿತು ನಟಿ ಪ್ರಣಿತಾ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ಪ್ರತಿಭಾವಂತ ನಟಿ ಪ್ರಣಿತಾ, ಬೇಡಿಕೆ ಇರುವಾಗಲೇ ಹಸೆಮಣೆ ಏರಿದ್ದರು. ಒಬ್ಬರನೋಬ್ಬರು ಪ್ರೀತಿಸಿ ಗುರು ಹಿರಿಯರ ಸಮ್ಮುಖದಲ್ಲಿ ಕಳೆದ ವರ್ಷ ನಿತಿನ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.