Connect with us

DAKSHINA KANNADA

ಸರಿಗಮಪ ಖ್ಯಾತಿಯ ಗಾಯಕಿ ಪೃಥ್ವಿ ಭಟ್ ಅದ್ದೂರಿ ರಿಸೆಪ್ಷನ್

ಬೆಂಗಳೂರು ಮೇ 17: ಇತ್ತೀಚೆಗೆ ಪೋಷಕರ ವಿರೋಧದ ನಡುವೆ ಮದುವೆಯಾಗಿದ್ದ ಸರಿಗಮಪ ಖ್ಯಾತಿಯ ಪೃಥ್ವಿ ಭಟ್‌ ಅದ್ದೂರಿಯಾಗಿ ರಿಸೆಪ್ಷನ್‌ ಮಾಡಿಕೊಂಡಿದ್ದಾರೆ.


ಶುಕ್ರವಾರ ಅದ್ದೂರಿಯಾಗಿ ಆರತಕ್ಷತೆ ಸಮಾರಂಭ ನಡೆಯಿತು. ರಿಸೆಪ್ಷನ್‌ಗೆ ಗಾಯಕ ವಿಜಯ್‌ ಪ್ರಕಾಶ್‌, ನಿರೂಪಕಿ ಅನುಶ್ರೀ, ಬಿಗ್‌ ಬಾಸ್‌ ಖ್ಯಾತಿ ಮೋಕ್ಷಿತಾ ಪೈ, ಬಿಗ್‌ಬಾಸ್‌ ಸೀಸನ್‌ 11ರ ವಿನ್ನರ್‌ ಹನುಮಂತ ಲಮಾಣಿ, ಪ್ರಥಮ್‌, ಸಿಂಗರ್‌ ಸುನೀಲ್‌ ಹಾಗೂ ಸರಿಗಮಪ ಸ್ಪರ್ಧಿಗಳು ಕೂಡ ಆಗಮಿಸಿದ್ದರು.


ಪೋಷಕರ ವಿರೋಧದ ನಡುವೆಯೂ ಪೃಥ್ವಿ ಭಟ್‌ ಅವರು ಮಾ.27 ರಂದು ದೇವಾಲಯವೊಂದರಲ್ಲಿ ಅಭಿಷೇಕ್‌ ಎಂಬ ಹುಡುಗನ ಜೊತೆ ವಿವಾಹವಾದರು. ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್‌ ಅವರನ್ನು ಪ್ರೀತಿಸಿ ಗಾಯಕಿ ಮದುವೆಯಾಗಿದ್ದರು.

ಪುತ್ರಿ ಪೃಥ್ವಿ ಮದುವೆಗೆ ತಂದೆ ಶಿವಪ್ರಸಾದ್‌ ವಿರೋಧ ವ್ಯಕ್ತಪಡಿಸಿದ್ದರು. ಈ ಸುದ್ದಿ ಭಾರಿ ವೈರಲ್‌ ಆಗಿತ್ತು. ಇದೀಗ ಗಾಯಕಿ ಅದ್ದೂರಿಯಾಗಿ ರಿಸೆಪ್ಷನ್‌ ಮಾಡಿಕೊಂಡಿದ್ದಾರೆ.

Share Information
Continue Reading
Advertisement
1 Comment

1 Comment

    Leave a Reply

    Your email address will not be published. Required fields are marked *