Connect with us

    KARNATAKA

    ಉಡುಪಿ – ನರಹಂತಕ ಪ್ರವೀಣ್ ಚೌಗುಲೆ 14 ದಿನ ನ್ಯಾಯಾಂಗ ಬಂಧನಕ್ಕೆ – ಹಿರಿಯಡ್ಕ ಸಬ್ ಜೈಲ್ ಗೆ ರವಾನೆ

    ಉಡುಪಿ ನವೆಂಬರ್ 22: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ನರಹಂತಕ ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು.

    ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಬಹುತೇಕ ಪೂರ್ಣಗೊಂಡಿದ್ದರ ಹಿನ್ನೆಲೆಯಲ್ಲಿ ಇಂದು ಉಡುಪಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ದೀಪಾ ಅವರ ಎದುರು ಮಲ್ಪೆ ಪೊಲೀಸರು ಹಾಜರು ಪಡಿಸಿದಾಗ ಆರೋಪಿಗೆ ಡಿಸೆಂಬರ್ 5 ರ ವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಆರೋಪಿಯನ್ನು ಕೋರ್ಟ್ ಗೆ ಕರೆ ತಂದಾಗ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ನ್ಯಾಯಾಂಗ ಬಂಧನದ ಹಿನ್ನೆಲೆಯಲ್ಲಿ ಆರೋಪಿ ಪ್ರವೀಣ್ ಚೌಗುಲೆಯನ್ನು ಹಿರಿಯಡ್ಕ ಸಬ್ ಜೈಲ್ ಗೆ ರವಾನೆ ಮಾಡಲಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply