KARNATAKA
ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆಗೆ ಸದ್ಯ ಜೈಲೇ ಗತಿ..!

ಉಡುಪಿ : ನಾಡನ್ನು ತಲ್ಲಣಗೊಳಿಸಿದ್ದ ಉಡುಪಿ ಮಲ್ಪೆ ನೇಜಾರು ಹತ್ಯಾ ಕಾಂಡ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ(39)ಗೆ ಸದ್ಯ ಜೈಲೆ ಗತಿಯಾಗಿದ್ದು ಆತನ ನ್ಯಾಯಾಂಗ ಬಂಧನ ಅವಧಿಯನ್ನು ಡಿ.30ರವರೆಗೆ ವಿಸ್ತರಿಸಿ ಉಡುಪಿ ನ್ಯಾಯಾಲಯ ಆದೇಶ ನೀಡಿದೆ.
ಉಡುಪಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಬಂಧನ ಅವಧಿಯನ್ನು ಡಿ.30ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಡಿ.5ರಂದು ನ್ಯಾಯಾಲಯವು ಆರೋಪಿಯ ನ್ಯಾಯಾಂಗ ಬಂಧನವನ್ನು ಡಿ.18ರವರೆಗೆ ವಿಸ್ತರಿಸಿದ್ದು, ಇಂದಿಗೆ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶೆ ದೀಪಾ ಅವರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ, ಡಿ.30ಕ್ಕೆ ಹಾಜರುಪಡಿಸುವಂತೆ ಆದೇಶ ನೀಡಿದರು. ಈ ಸಂದರ್ಭ ದಲ್ಲಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ.ನದಾಫ್ ಹಾಜರಿದ್ದರು.
