LATEST NEWS
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಮತ್ತೊರ್ವ ಆರೋಪಿ ಎನ್ಐಎ ವಶಕ್ಕೆ
ಮಂಗಳೂರು ನವೆಂಬರ್ 13 : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಮತ್ತೊಬ್ಬ ಆರೋಪಿಯನ್ನು ಎನ್ಐಎ ಶನಿವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.
ಬಂಧಿತರನ್ನು ಸಾಹಿದ್ ಬೆಳ್ಳಾರೆ ಎಂದು ಗುರುತಿಸಲಾಗಿದೆ. ಎನ್‌ಐಎ ತಂಡವು ಈ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ಮೂವರು ಆರೋಪಿಗಳನ್ನು ಬಂಧಿಸಿತ್ತು. ಶನಿವಾರ ವಶಕ್ಕೆ ಪಡೆದಿರುವ ವ್ಯಕ್ತಿಯು ಈ ಪ್ರಕರಣದಲ್ಲಿ ಇತ್ತೀಚೆಗೆ ಬಂಧನಕ್ಕೊಳಗಾದ ಆರೋಪಿಯೊಬ್ಬರ ಹತ್ತಿರದ ಸಂಬಂಧಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ.