Connect with us

DAKSHINA KANNADA

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ರಾಷ್ಟ್ರೀಯ ತನಿಖಾ ದಳಕ್ಕೆ(ಎನ್‌ಐಎ) ಹಸ್ತಾಂತರ: ಸಿಎಂ ಬೊಮ್ಮಾಯಿ

ಬೆಂಗಳೂರು, ಜುಲೈ 29: ಬೆಳ್ಳಾರೆಯ ಬಿಜೆಪಿಯ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆಯ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ(ಎನ್‌ಐಎ) ವಹಿಸಲಾಗಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ಪೊಲೀಸ್‌ ಮಹಾನಿರ್ದೇಶಕರ ಜೊತೆ ಚರ್ಚಿಸಿದ್ದೇನೆ. ಇದು ಅಂತರಾಜ್ಯ ಪ್ರಕರಣವಾದ ಕಾರಣ ಎನ್‌ಐಎಗೆ ವಹಿಸಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಮತ್ತು ಕೇರಳದ ಗಡಿಯಲ್ಲಿ ಸಿಸಿಟಿವಿಯನ್ನು ಅಳವಡಿಸಬೇಕು. ಈ ಸಂಬಂಧ ಕೇಂದ್ರಕ್ಕೆ ಪತ್ರ ಬರೆಯಲು ಗೃಹ ಇಲಾಖೆಗೆ ಸೂಚನೆ ಕೊಡುತ್ತೇನೆ ಎಂದು ಹೇಳಿದರು. ಸುರತ್ಕಲ್ ಫಾಝಿಲ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ತಂಡಗಳನ್ನು ರಚಿಸಲಾಗಿದೆ. ಮಂಗಳೂರಲ್ಲಿ ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಲಾಗಿದೆ ಎಂದರು.

Advertisement
Click to comment

You must be logged in to post a comment Login

Leave a Reply