Connect with us

LATEST NEWS

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ -ಎಸ್ಕೇಪ್ ಆಗಿದ್ದ ಮಹಮ್ಮದ್ ಶರೀಫ್ ಅರೆಸ್ಟ್

ಮಂಗಳೂರು ಡಿಸೆಂಬರ್ 20: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಮತ್ತೊಬ್ಬ ಆರೋಪಿಯನ್ನುಅರೆಸ್ಟ್ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್(55) ಬಂಧಿತ ಆರೋಪಿ. ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ ಬಂಧಿಸಲಾಗಿದೆ.

ಈತನ ಪತ್ತೆಗಾಗಿ ಎನ್​ಐಎ‌ ಅಧಿಕಾರಿಗಳು 5 ಲಕ್ಷ ರೂ. ರಿವಾರ್ಡ್ ಘೋಷಿಸಿದ್ದರು. ಈತ ಪ್ರವೀಣ್ ಕೊಲೆಗೆ ಸಂಚು ರೂಪಿಸುತ್ತಿದ್ದ ತಂಡದಲ್ಲಿದ್ದ. ಜೊತೆಗೆ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್​ಐಎ ಅಧಿಕಾರಿಗಳು ಶರೀಫ್ ಮನೆ ಮೇಲೆ ದಾಳಿ ಮಾಡಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿಯಲ್ಲಿರುವ ಆರೋಪಿ ನೌಷದ್ ಮನೆ ಮೇಲೆ ಕೂಡ ಎನ್​ಐಎ ಅಧಿಕಾರಿಗಳು ಇತ್ತೀಚೆಗೆ ದಾಳಿ ಮಾಡಿದ್ದರು. ದಾಳಿ ವಿಚಾರ ತಿಳಿದು ಮನೆ ಲಾಕ್ ಮಾಡಿ ಕುಟುಂಬ ಪರಾರಿ ಆಗಿತ್ತು. ನೌಷದ್ ಪತ್ತೆಗೂ ಎನ್​ಐಎ 2 ಲಕ್ಷ ರೂ. ರಿವಾರ್ಡ್ ಘೋಷಿಸಲಾಗಿತ್ತು. ಎನ್​ಐಎ ಪ್ರವೀಣ್ ನೆಟ್ಟಾರು ಕೊಲೆ ಕೇಸ್ ತನಿಖೆ ನಡೆಸುತ್ತಿದ್ದು, 21 ಆರೋಪಿಗಳನ್ನು ಅರೆಸ್ಟ್ ಮಾಡಿ ಆರೋಪಿಗಳ ವಿರುದ್ದ ಚಾರ್ಶೀಟ್ ಸಲ್ಲಿಕೆ ಮಾಡಿತ್ತು. ಮಹಮ್ಮದ್ ಶರೀಫ್ ಸೇರಿದಂತೆ ಈವರೆಗೆ 20 ಜನರನ್ನು ಬಂಧಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *