LATEST NEWS
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಪ್ರಮುಖ ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿದ ಎನ್ಐಎ
ಸುಳ್ಯ ಜನವರಿ 06: ಬೆಳ್ಳಾರೆ ನಿವಾಸಿ, ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದಲ್ಲಿ ತಪ್ಪಿಸಿಕೊಂಡಿರುವ ಆರೋಪಿಗಳ ಮಾಹಿತಿ ನೀಡಿದವರಿಗೆ 14 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ.
ಆರೋಪಿಗಳಾದ ಸುಳ್ಯದ ಬುದು ಹೌಸ್‌ನ ಎಸ್. ಮುಹಮ್ಮದ್ ಮುಸ್ತಫಾ ಯಾನೆ ಮುಸ್ತಫ ಪೈಚಾರ್ ಮತ್ತು ಮಡಿಕೇರಿಯ ಎಂ.ಎಚ್.ತೌಫಲ್ ಕುರಿತು ಸುಳಿವು ಕೊಟ್ಟವರಿಗೆ ನೀಡುವವರಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲುಮುಟ್ಟಲು ವೀಟಿಲ್ ಎಂ.ಆರ್.ಉಮ್ಮರ್ ಫಾರೂಕ್ ಯಾನೆ ಉಮ್ಮರ್, ಸಿದ್ದಿಕ್ ಯಾನೆ ಪೈಂಟರ್ ಸಿದ್ದಿಕ್ ಯಾನೆ ಗುಜರಿ ಸಿದ್ದಿಕ್ ಕುರಿತು ಮಾಹಿತಿ ನೀಡುವವರಿಗೆ ತಲಾ 2 ಲಕ್ಷ ರೂ. ನೀಡಲಾಗುವುದು ಎಂದು ಕೇರಳದ ಹಲವೆಡೆ ಅಂಟಿಸಲಾಗಿರುವ ನೆೋಟೀಸ್‌ನಲ್ಲಿ ಎನ್ಐಎ ತಿಳಿಸಿದೆ.
ಈ ನಾಲ್ವರು ಆರೋಪಿಗಳು ಕೇರಳದಲ್ಲಿ ತಲೆಮರೆಸಿಕೊಂಡಿರುವ ಶಂಕೆಯಿದ್ದು ನೆೋಟಿಸ್ ಪ್ರತಿಗಳನ್ನು ಕಲ್ಲಿಕೋಟೆ ಜಿಲ್ಲೆಯ ವಿವಿಧೆಡೆ ಮತ್ತು ಕಾಸರಗೋಡು ಜಿಲ್ಲೆಯ ಹಲವು ಕಡೆಗಳಲ್ಲಿ ಹಾಕಲಾಗಿದೆ ಎಂದು ತಿಳಿದು ಬಂದಿದೆ. ಕಳೆದ ವರ್ಷ ಜುಲೈ 26ರಂದು ಪ್ರವೀಣ್ ನೆಟ್ಟಾರು ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕೊಲೆಗೈದು ಪರಾರಿಯಾಗಿದ್ದರು. ನಂತರ ನಡೆದ ಬೆಳವಣಿಗೆಗಳಲ್ಲಿ ಕೊಲೆಗೆ ಸಹಕಾರ ನೀಡಿದ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು. ಈಗಾಗಲೇ ಕರ್ನಾಟಕದ ಹಲವೆಡೆ ನಾಲ್ವರು ಆರೋಪಿಗಳ ಮಾಹಿತಿ ನೀಡುವಂತೆಯೂ ನೋಟಿಸ್ ಹಾಕಲಾಗಿದೆ.
You must be logged in to post a comment Login