Connect with us

    DAKSHINA KANNADA

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಶಫೀಕ್ ಗೆ ನ್ಯಾಯಾಂಗ ಬಂಧನ.

    ಪುತ್ತೂರು, ಆಗಸ್ಟ್ 07: ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಶಫೀಕ್ ಬೆಳ್ಳಾರೆಯನ್ನು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಶಫೀಕ್ ಬೆಳ್ಳಾರೆಯನ್ನು ಆ.6 ಸಂಜೆ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶರು ಆರೋಪಿಗೆ 15 ದಿನಗಳ ವಿಚಾರಣಾ ಹಂತದ ನ್ಯಾಯಾಂಗ ವಿಧಿಸಿದ್ದಾರೆ.

    ಈ ಹಿಂದೆ ನ್ಯಾಯಾಂಗ ಬಂಧನದಲ್ಲಿದ್ದ ಶಫೀಕ್ ಬೆಳ್ಳಾರೆ ಮತ್ತು ಜಾಕೀರ್ ಸವಣೂರು ಅವರಿಬ್ಬರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರು. 5 ದಿನ ಕಳೆ ದ ಬಳಿಕ ಅವರಿಬ್ಬರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಸಂದರ್ಭ ಜಾಕೀರ್‌ಗೆ ನ್ಯಾಯಾಂಗ ಬಂಧನ ವಿಧಿಸಿ ಶಫೀಕ್ ನನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಇದೀಗ ಶಫೀಕ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply