Connect with us

    LATEST NEWS

    ಅಪ್ಘಾನ್ ಮುಸ್ಲಿಂರಿಗೆ ಭಾರತದಲ್ಲಿ ಆಶ್ರಯ ನೀಡಬಾರದು: ಪ್ರವೀಣ್ ತೊಗಾಡಿಯಾ

    ನಾಗ್ಪುರ : ಅಫ್ಘಾನಿಸ್ತಾನದಿಂದ ಬರುವ ಮುಸ್ಲಿಂ ಪ್ರಜೆಗಳಿಗೆ ಭಾರತದಲ್ಲಿ ಆಶ್ರಯ ಕಲ್ಪಿಸಬಾರದು ಎಂದು ಅಂತರರಾಷ್ಟ್ರೀಯ ಹಿಂದೂ ಪರಿಷತ್‍ನ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.


    ನಾಗ್ಪುರ-ವಾರ್ಧಾ ಪ್ರದೇಶದ ಮೂರು ದಿನಗಳ ಭೇಟಿಗಾಗಿ ಇಲ್ಲಿಯ ವಿಮಾನ ನಿಲ್ದಾಣಕ್ಕೆ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಭಾರತವು ತಾಲಿಬಾನ್ ಉದ್ದೇಶದ ಕೇಂದ್ರಬಿಂದುವಾಗಿರುವುದರಿಂದ ದೇಶವು ಬಹಳ ದೊಡ್ಡ ಅಪಾಯ ಎದುರಿಸುತ್ತಿದೆ. ಆದ್ದರಿಂದ ದೇಶವು ತಾಲಿಬಾನೀಕರಣ ಆಗುವುದನ್ನು ತಡೆಯಬೇಕಿದೆ ಎಂದರು.

    ಅಫ್ಗಾನಿಸ್ತಾನದಿಂದ ಬರುವ ಮುಸ್ಲಿಂ ಪ್ರಜೆಗಳಿಗೆ ಭಾರತದಲ್ಲಿ ಆಶ್ರಯ ಕಲ್ಪಿಸಬಾರದು ಎಂದು ಅಂತರರಾಷ್ಟ್ರೀಯ ಹಿಂದೂ ಪರಿಷತ್‌ನ ಮುಖ್ಯಸ್ಥ ಪ್ರವೀಣ್‌ ತೊಗಾಡಿಯಾ ಅವರು ಕೇಂದ್ರ ಸರ್ಕಾರವನ್ನು ಗುರುವಾರ ಒತ್ತಾಯಿಸಿದ್ದಾರೆ. ಆದರೆ ಅಲ್ಲಿಂದ ಬರುವ ಹಿಂದೂ ಮತ್ತು ಸಿಖ್‌ ನಿರಾಶ್ರಿತರಿಗೆ ಭಾರತವು ಗಡಿಯನ್ನು ತೆರೆದಿರಿಸಬೇಕು ಎಂದು ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply