ಅಭಿನಂದನ್ ವರ್ಧಮಾನ್ ಸುರಕ್ಷತೆಗಾಗಿ ದೇವರಲ್ಲಿ ಪ್ರಾರ್ಥನೆ

ಪುತ್ತೂರು ಫೆಬ್ರವರಿ 28: ಪಾಕಿಸ್ತಾನದ ವಶದಲ್ಲಿರುವ ಭಾರತೀಯ ವಾಯುಸೇನೆ ಯುದ್ಧ ವಿಮಾನದ ಪೈಲಟ್ ಅಭಿನಂದನ್ ವರ್ಧಮಾನ್ ಅವರ ಸುರಕ್ಷತೆಗಾಗಿ‌ ಯುವಭಾರತ್ ಸಂಘಟನೆ ವತಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಲಾಯಿತು.

ಪಾಕಿಸ್ತಾನದ ವಶದಲ್ಲಿರುವ ಪೈಲಟ್ ಅಭಿನಂದನ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಅವರಿಗೆ ಯಾವುದೇ ತೊಂದರೆಯಾಗಬಾರದು ಎಂದು ಸಂಘಟನೆ ಕಾರ್ಯಕರ್ತರು ದೇವರಲ್ಲಿ ಪ್ರಾರ್ಥಿಸಿದರು.

 

Facebook Comments

comments