DAKSHINA KANNADA
ಕೊರಗಜ್ಜ ಸ್ವಾಮಿಗೆ ಅಪಮಾನ – ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ
ಪುತ್ತೂರು: ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಅಗರಿಯಲ್ಲಿ ಸ್ವಾಮಿ ಕೊರಗಜ್ಜನ ವೇಷ ಧರಿಸಿ ದೈವ ಭಕ್ತರ ಭಾವನೆಗೆ ಅಪಮಾನ ಮಾಡಿರುವ ಮುಸ್ಲಿಂ ವರ ಮತ್ತು ಇದಕ್ಕೆ ಕುಮ್ಮಕ್ಕು ನೀಡಿದ ಇದರ ಹಿಂದಿರುವ ಹಾಗು ಷಡ್ಯಂತ್ರ ನಡೆಸಿದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಭಕ್ತರು ದೇವರ ಮೊರೆ ಹೋಗಿದ್ದು,
ಇಂದು ದ.ಕ. ಮತ್ತು ಉಡುಪಿ ಜಿಲ್ಲೆಗಳ 1 ಸಾವಿರ ಶ್ರದ್ಧಾ ಕೇಂದ್ರಗಳಲ್ಲಿ ಹಿಂದೂಗಳಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶ್ವಹಿಂದು ಪರಿಷತ್ ವತಿಯಿಂದ ಸಾಮೂಹಿಕ ಪ್ರಾರ್ಥನೆ ನಡೆಯಿತು. ವಿಶ್ವಹಿಂದು ಪರಿಷತ್ ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ, ನಗರ ಪ್ರಖಂಡ ಸಂಚಾಲಕ ಹರೀಶ್ ದೋಳ್ಪಾಡಿ, ನಗರ ಅಧ್ಯಕ್ಷ ಜನಾರ್ದನ ಬೆಟ್ಟ, ವಿಶಾಖ್ ಶಶಿಹಿತ್ಲು ಮುಂತಾದವರು ಈ ಸಂದರ್ಭ ಉಪಸ್ಥಿತರಿದ್ದರು.