ರಾಯಚೂರು ಜನವರಿ 29: ಕೌಟುಂಬಿಕ ಕಲಹಕ್ಕೆ ನಾಲ್ಕು ತಿಂಗಳ ಗರ್ಭಿಣಿ ಸೊಸೆಯ ಕತ್ತು ಸೀಳಿ ಮಾವನೇ ಕೊಲೆ ಮಾಡಿದ ಭೀಕರ ಘಟನೆ ರಾಯಚೂರಿನ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ನಡೆದಿದೆ.

ಮೃತಳನ್ನು 25 ವರ್ಷದ ರೇಖಾ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆ ಮಾವ ಸಿದ್ದಪ್ಪ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ರೇಖಾಳ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ರೇಖಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಸಿದ್ದಪ್ಪನನ್ನು ವಶಕ್ಕೆ ಪಡೆಯಲಾಗಿದೆ.



