LATEST NEWS
ರಾಹುಲ್ ಗಾಂಧಿ ದಕ್ಷಿಣಕನ್ನಡ ಜಿಲ್ಲಾ ಪ್ರವಾಸಕ್ಕೆ ಭರದ ಸಿದ್ದತೆ – ರಮಾನಾಥ ರೈ

ರಾಹುಲ್ ಗಾಂಧಿ ದಕ್ಷಿಣಕನ್ನಡ ಜಿಲ್ಲಾ ಪ್ರವಾಸಕ್ಕೆ ಭರದ ಸಿದ್ದತೆ – ರಮಾನಾಥ ರೈ
ಮಂಗಳೂರು ಮಾರ್ಚ್ 19: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾರ್ಚ್ 20, 21 ರಂದು ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಕಾಂಗ್ರೇಸ್ ಭರ್ಜರಿ ತಯಾರಿ ನಡೆಸುತ್ತಿದ್ದೆ.
ಈ ಕುರಿತಂತೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಉಸ್ತುವಾರಿ ಸಚಿವ ರಮಾನಾಥ ರೈ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ಭರ್ಜರಿ ತಯಾರಿ ನಡೆದಿದೆ, ನಾಳೆ ಬೆಳಿಗ್ಗೆ ರಾಹುಲ್ ಗಾಂಧಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು ಅಲ್ಲಿಂದ ಉಡುಪಿ ಜಿಲ್ಲೆಗೆ ತೆರಳಲಿದ್ದಾರೆ ಎಂದು ತಿಳಿಸಿದರು. ಉಡುಪಿಯಲ್ಲಿ ಕಾಪು, ಪಡುಬಿದ್ರಿ, ಮೂಲ್ಕಿಯಲ್ಲಿ ರಾಹುಲ್ ಗಾಂಧಿ ಅವರ ರೋಡ್ ಷೋ ನಡೆಯಲಿದೆ ಎಂದು ತಿಳಿಸಿದರು.

ನಂತರ ಸುರತ್ಕಲ್ ಕಾರ್ಯಕ್ರಮದ ಬಳಿಕ ಜ್ಯೋತಿ ವೃತ್ತದಿಂದ ನೆಹರೂ ಮೈದಾನದವರೆಗೆ ರೋಡ್ ಷೋ ನಡೆಯಲಿದೆ. ನಂತರ ನೆಹರೂ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯ ಕಾಂಗ್ರೆಸ್‌ನಲ್ಲಿ ರಾಹುಲ್ ಭೇಟಿ ನೀಡುತ್ತಿರುವುದು ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಮೂಡಿಸಲಿದೆ ಎಂದು ಹೇಳಿದರು. ಕಾರ್ಯಕ್ರಮದ ಬಳಿಕ ರೊಸಾರಿಯೋ ಚರ್ಚ್, ಕುದ್ರೋಳಿ ದೇವಾಲಯ, ಉಳ್ಳಾಲ ದರ್ಗಾಕ್ಕೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.