KARNATAKA
ಸಿಎಂ ಪರ ಪ್ರೆಸ್ ಮಿಟ್ ಮಾಡುವಾಗಲೇ ಹೃದಯಘಾತದಿಂದ ಕುರುಬ ಸಂಘದ ಅಧ್ಯಕ್ಷರ ಮೃತ್ಯು
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರೆಸ್ ಮಿಟ್ ಮಾಡುವ ವೇಳೆಯಲ್ಲೇ ಹೃದಯಾಘಾತದಿಂದ ಕುಸಿದು ಕೋಲಾರ ಕುರುಬ ಸಂಘದ ಅಧ್ಯಕ್ಷ ರವೀಂದ್ರ ಸಾವನ್ನಪ್ಪಿರುವ ಘಟನೆ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ಸೋಮವಾರ ನಡೆದಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ಹಿನ್ನೆಲೆ ಕುರುಬ ಸಂಘವು ಕಬ್ಬನ್ ಪಾರ್ಕ್ ಒಳಗಿರುವ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ಕರೆದಿದ್ದರು. ಈ ವೇಳೆ ಮಾತನಾಡು ತ್ತಿದ್ದಾಗಲೇ ಏಕಾಏಕಿ ರವೀಂದ್ರ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಸಿಎಂ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ನಿರ್ಧಾರದ ಬಗ್ಗೆ ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಇಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ದಲಿತ ಅಲ್ಪಸಂಖ್ಯಾತರ ಸಂಘದಿಂದ ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಸಿ ಕೆ ರವಿಚಂದ್ರನ್ ಎನ್ನುವವರು ಹೃದಯಾಘಾಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ. pic.twitter.com/rdmuofsdwe
— eedina.com ಈ ದಿನ.ಕಾಮ್ (@eedinanews) August 19, 2024
You must be logged in to post a comment Login