Connect with us

LATEST NEWS

ಉಡುಪಿಗೆ ರಾಷ್ಟ್ರಪತಿ ಭೇಟಿ ಶ್ರೀಕೃಷ್ಣ ಮಠಕ್ಕೆ ಡಿಸೆಂಬರ್ 27ರಂದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

ಉಡುಪಿಗೆ ರಾಷ್ಟ್ರಪತಿ ಭೇಟಿ ಶ್ರೀಕೃಷ್ಣ ಮಠಕ್ಕೆ ಡಿಸೆಂಬರ್ 27ರಂದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

ಉಡುಪಿ, ಡಿಸೆಂಬರ್ 19 : ಉಡುಪಿ ಜಿಲ್ಲೆಗೆ ಡಿಸೆಂಬರ್ 27 ರಂದು ರಾಷ್ಟ್ರಪತಿಗಳು ಉಡುಪಿಗೆ ಆಗಮಿಸಲಿರುವ ಹಿನ್ನಲೆಯಲ್ಲಿ ಶ್ರೀಕಷ್ಣ ಮಠಕ್ಕೆ ಬೆಳಿಗ್ಗೆ 6 ರಿಂದ ಸಂಜೆ 3 ಗಂಟೆಯವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಪೇಜಾವರ ಮಠದ ವಿಶ್ವೇಶತೀರ್ಥರು ಸನ್ಯಾಸಾಶ್ರಮ ಸ್ವೀಕರಿಸಿ 80 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 27ರಂದು ರಾಜಾಂಗಣದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳ ಆಗಮಿಸಲಿದ್ದಾರೆ.

ಈ ಹಿನ್ನಲೆಯಲ್ಲಿ ರಾಷ್ಟ್ರಪತಿಗಳು ಸಕ್ರ್ಯೂಟ್ ಹೌಸ್, ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುವುದರಿಂದ, ಭದ್ರತಾ ದೃಷ್ಠಿಯಿಂದ, ಉಡುಪಿಯ ಸಂಸ್ಕೃತ ಕಾಲೇಜು ಪಕ್ಕದ ಗೇಟಿನಿಂದ ಸಂಪೂರ್ಣ ರಥಬೀದಿಯ ಸುತ್ತ ಹಾಗೂ ರಾಜಾಂಗಣದ ಸುತ್ತಮುತ್ತ ಇರುವ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಡಿಸೆಂಬರ್ 27 ರ ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮುಚ್ಚುವಂತೆ ಹಾಗೂ ಸಾರ್ವಜನಿಕರಿಗೆ ಸದ್ರಿ ದಿನದಂದು ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಶ್ರೀ ಕೃಷ್ಣ ಮಠ ಭೇಟಿ ನಿರ್ಬಂಧಿಸಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿರುತ್ತಾರೆ.