LATEST NEWS
ಬೆಸಿಗೆಯಲ್ಲಿ ಇಳಿಕೆಯಾಗಲಿದೆಯಂತೆ ಪೆಟ್ರೋಲ್ ಬೆಲೆ – ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ನವದೆಹಲಿ ಫೆಬ್ರವರಿ 26: ದೇಶದಲ್ಲಿ ದಿನದಿಂದ ದಿನಕ್ಕೆ ಏರಿಕೆಯಲ್ಲಿರುವ ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಚಳಿಗಾಲದ ಬಳಿಕ ಇಳಿಕೆಯಾಗಲಿದೆ ಎಂದು ಕೆಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗಿರುವುದು ಗ್ರಾಹಕರ ಮೇಲೂ ಪರಿಣಾಮ ಬೀರಿದ್ದು, ಚಳಿಗಾಲ ಮುಗಿಯುತ್ತಿದ್ದಂತೆ ಪೆಟ್ರೋಲ್ ಬೆಲೆ ಸ್ವಲ್ಪ ಇಳಿಕೆಯಾಗಲಿದೆ. ಇದು ಅಂತರರಾಷ್ಟ್ರೀಯ ವಿಚಾರ. ಬೇಡಿಕೆ ಹೆಚ್ಚಾಗಿರುವುದರಿಂದ ಬೆಲೆ ಏರಿಕೆಯಾಗಿದೆ. ಚಳಿಗಾಲದಲ್ಲಿ ಹೀಗಾಗುತ್ತದೆ. ಬೆಲೆ ಇಳಿಕೆಯಾಗಲಿದೆ” ಎಂದರು.
ಇನ್ನು ದೇಶದಲ್ಲಿ ಕಳೆದ ಕೆಲವು ವಾರಗಳಿಂದ ಪ್ರತಿ ದಿನ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ಬೆಲೆ ಏರಿಕೆಯಾಗುತ್ತಿದ್ದು, 100ರ ಸನಿಹ ತಲುಪಿದ್ದು, ಗುರುವಾರವಷ್ಟೇ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 25ರಷ್ಟು ಹೆಚ್ಚಳವಾಗಿದೆ.