KARNATAKA
ಫೇಸ್‌ಬುಕ್ ಸುಂದರಿಯ ಮೋಹದ ಬಲೆಗೆ ಸಿಕ್ಕಿ ಲಕ್ಷ ಲಕ್ಷ ಕಳೆದುಕೊಂಡ ಅರ್ಚಕ..!
ಮಂಡ್ಯ : ಸಾಮಾಜಿಕ ಜಾಲ ತಾಣ ಫೇಸ್‌ಬುಕ್ (facebook) ನಲ್ಲಿನ ಸುಂದರಿಯ ಮೋಹದ ಜಾಲಕ್ಕೆ ಬಿದ್ದ ಅರ್ಚಕನೋರ್ವ ಲಕ್ಷ ಲಕ್ಷ ಕಳಕೊಂಡ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.
ಮಂಡ್ಯದ ಪಾಂಡವಪುರದ ಪಟ್ಟಸೋಮನಹಳ್ಳಿ ಗ್ರಾಮದ ಶಿವಶೈಲ ದೇವಸ್ಥಾನದ ಅರ್ಚಕ ವಿಜಯ್ ಕುಮಾರ್ ಹಣ ಕಳೆದುಕೊಂಡವರಾಗಿದ್ದು ಇದೀಗ ಸೈಬರ್ ಕ್ರೈಂ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಶಿವಶೈಲ ದೇವಸ್ಥಾನದ ಅರ್ಚಕ ವಿಜಯ್ ಕುಮಾರ್, ಕುಟುಂಬದಿಂದ ದೂರವಾಗಿ ಒಬ್ಬರೇ ವಾಸಿಸುತ್ತಿದ್ದರು. ಇವರಿಗೆ ಕೆಲ ದಿನಗಳ ಹಿಂದೆ ಫೇಸ್‌ಬುಕ್‌ನಲ್ಲಿ ಸಿರಿ ಶ್ರೇಷ ಸರಿತಾ ಎಂಬ ಸುಂದರಿಯ ಪರಿಚಯವಾಗಿದೆ. ಹೀಗಾಗಿ ಆಕೆ ಜತೆ ಪ್ರತಿ ದಿನ ವಿಜಯ್ ಕುಮಾರ್ ಚಾಟಿಂಗ್ ಮಾಡುತ್ತಿದ್ದರು.ವಿಜಯ್ ಕುಮಾರ್ ಬಗ್ಗೆ ತಿಳಿದುಕೊಂಡ ಯುವತಿ, ವಸತಿ, ಆರೋಗ್ಯ ಸಮಸ್ಯೆ ಅಂತ ಹೇಳಿ ಹಂತ ಹಂತವಾಗಿ ಹಣ ಪೀಕಿದ್ದಾಳೆ. ಹೀಗೆ ಸುಮಾರು 1 ಲಕ್ಷದ 40 ಸಾವಿರದಷ್ಟು ಹಣವನ್ನು ಈ ಫೇಸ್ ಬುಕ್ ಸುಂದರಿ ಲಪಟಾಯಿಸಿದ್ದಾಳೆ.ಬಣ್ಣ ಬಣ್ಣದ ಮಾತುಗಳಿಂದ ವಿಜಯ್ ಕುಮಾರ್‌ಗೆ ಬಲೆ ಹಾಕಿದ ಸುಂದರಿ ಮಾತು ನಂಬಿ ಫೋನ್ ಪೇ ಮೂಲಕ ವಿಜಯ್ ಅವರಿಂದ ಹಣ ಸುಲಿಯುತ್ತಿದ್ದಳು ಎನ್ನಲಾಗಿದೆ. ಹಣ ಕೊಟ್ಟ ಬಳಿಕ ಭೇಟಿ ಆಗುವಂತೆ ಸುಂದರಿಗೆ ವಿಜಯ್ ಒತ್ತಡ ಹೇರಲಾರಂಭಿಸಿದಾಗ ಇಂದು, ನಾಳೆ ಎಂದು ಹೇಳಿ ಕೊನೆಗೆ ಫೇಸ್‌ಬುಕ್ ಬ್ಲಾಕ್ ಮಾಡಿ ಎಸ್ಕೇಪ್ ಆಗಿದ್ದಾಳೆ. ಸುಂದರಿ ಮಾಯವಾದ ಬಳಿಕ ತಾನು ಮೋಸ ಹೋಗಿರುವ ಬಗ್ಗೆ ವಿಜಯ್ ಕುಮಾರ್‌ಗೆ ಮನವರಿಕೆಯಾಗಿದ್ದು, ಹಣ ವಾಪಸ್ ಕೊಡಿಸುವಂತೆ ಇದೀಗ ಪೊಲೀಸರ ಮೊರೆ ಹೋಗಿದ್ದಾರೆ.
You must be logged in to post a comment Login