KARNATAKA
ಅಕ್ಟೋಬರ್ 25 ರಿಂದ ಪ್ರಾಥಮಿಕ ಶಾಲೆ ಆರಂಭ..!!

ಬೆಂಗಳೂರು ಅಕ್ಟೋಬರ್ 18: ಕೊನೆಗೂ ಪ್ರಾಥಮಿಕ ಶಾಲೆ ಆರಂಭಕ್ಕೆ ಮುಹೂರ್ತ ಕೂಡಿ ಬಂದಿದ್ದು, ಅಕ್ಟೋಬರ್ 25 ರಿಂದ ಪ್ರಾಥಮಿಕ ಶಾಲೆ ತೆರೆಯಲು ಸರ್ಕಾರ ಅಧಿಕೃತ ಆದೇಶ ಜಾರಿ ಮಾಡಿದೆ.
ಕೊರೊನಾದ ಎರಡನೇ ಅಲೆ ನಂತರ ಬಂದ್ ಆಗಿದ್ದ 1 ರಿಂದ 5ನೇ ತರಗತಿ ತೆರೆಯಲು ಸರ್ಕಾರ ಇಂದು ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಮಾರ್ಗಸೂಚಿ ಪ್ರಕಾರ ಶೇಕಡ 50 ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು. ತರಗತಿಯಲ್ಲಿ 1 ಮೀಟರ್ ಅಂತರದಲ್ಲಿ ಕೂರಬೇಕು. ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯವಾಗಿ ಬಳಕೆ ಮಾಡಬೇಕು.

ಅಲ್ಲದೆ ಪೋಷಕರ ಅನುಮತಿ ಪಡೆದು ಮಕ್ಕಳು ತರಗತಿಗೆ ಬರಬಹುದು. ಪ್ರವೇಶ ದ್ವಾರಗಳಲ್ಲಿ ಸೇರದಂತೆ ಶಾಲೆಯ ಒಳಗೆ, ಆವರಣದಲ್ಲಿ, ತರಗತಿಗಳ ಒಳಗೆ ಗುಂಪುಗೂಡುವಂತಿಲ್ಲ. ಶಿಕ್ಷಕರು, ಸ್ಟಾಫ್ ಎರಡು ಡೋಸ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು. ಎರಡು ಡೋಸ್ ಪೂರ್ಣ ಮಾಡಿರುವ ಶಿಕ್ಷಕರು, ಸ್ಟಾಫ್ ಗೆ ಮಾತ್ರ 1-5 ತರಗತಿಗಳೊಳಗೆ ಪ್ರವೇಶ ಕಲ್ಪಿಸಲಾಗಿದೆ.