LATEST NEWS
ಮೇ 5 ರಂದು ಮಂಗಳೂರಿಗೆ ಮೋದಿ ಬದಲಾಗಲಿದೆಯೇ ಕರಾವಳಿ ಚಿತ್ರಣ

ಮೇ 5 ರಂದು ಮಂಗಳೂರಿಗೆ ಮೋದಿ ಬದಲಾಗಲಿದೆಯೇ ಕರಾವಳಿ ಚಿತ್ರಣ
ಮಂಗಳೂರು ಮೇ 02 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ನಾಟಕ ವಿಧಾನಸಭಾ ರಂಗು ದಿನದಿಂದ ದಿನಕ್ಕೆ ಏರತೊಡಗಿದೆ. ಚುನಾವಣಾ ಪ್ರಚಾರಕ್ಕೆ ರಾಷ್ಟ್ರೀಯ ನಾಯಕರ ದಂಡೇ ಕರಾವಳಿ ಜಿಲ್ಲೆಗಳತ್ತ ಹರಿದು ಬರುತ್ತಿದೆ. ಈ ನಡುವೆ ಇತ್ತೀಚೆಗಷ್ಟೇ ಕಾಂಗ್ರೇಸ್ ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಎರಡನೇ ಬಾರಿ ಕರಾವಳಿಗೆ ಭೇಟಿ ಪ್ರಚಾರ ನಡೆಸಿದ್ದರು.
ಈಗ ಬಿಜೆಪಿ ಸರದಿ ಉಡುಪಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ದಕ್ಷಿಣಕನ್ನಡ ಜಿಲ್ಲೆಯಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರದಾನಿ ಮೋದಿ ಮತ್ತೇ ಕರಾವಳಿಗೆ ಭೇಟಿ ನೀಡಲಿದ್ದಾರೆ. ಇದೇ ಬರುವ ಮೇ 5 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಮೇ 5 ರಂದು ಮಂಗಳೂರಿಗೆ ಆಗಮಿಸಲಿರುವ ಮೋದಿ ನಗರದ ಕೇಂದ್ರ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಮಾವೇಶ ವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿದೆ. ಜಿಲ್ಲೆಯ ಕೆಲವು ಕ್ಷೇತ್ರಗಳಲ್ಲಿರುವ ಬಂಡಾಯ ಶಮನಕ್ಕೆ ಬಿಜೆಪಿ ಮುಖಂಡರು ಶತಾಯಗತಾಯ ಪ್ರಯತ್ನ ನಡೆಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೋದಿ ಪ್ರಚಾರದ ಬಳಿಕ ಚುನಾವಣೆಯ ಚಿತ್ರಣವೇ ಬದಲಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.