Connect with us

    BELTHANGADI

    ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಮದುವೆ ಬಸ್ – ಹಲವರಿಗೆ ಗಾಯ

    ಉಪ್ಪಿನಂಗಡಿ ಎಪ್ರಿಲ್ 04 : ಕಂಟೈನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಲವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಬುಧವಾರ ಸಂಜೆ ಸಂಭವಿಸಿದೆ.


    ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಮದುವೆ ದಿಬ್ಬಣದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬಸ್‍ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply