Connect with us

LATEST NEWS

ಕುಂದಾಪುರದಲ್ಲಿ ಖಾಸಗಿ ಬಸ್ ಮತ್ತು ಬೈಕ್ ಅಪಘಾತ : ಬೈಕ್ ಸವಾರನ ದಾರುಣ ಸಾವು

 ಕುಂದಾಪುರದಲ್ಲಿ ಖಾಸಗಿ ಬಸ್ ಮತ್ತು ಬೈಕ್ ಅಪಘಾತ : ಬೈಕ್ ಸವಾರನ ದಾರುಣ ಸಾವು

ಉಡುಪಿ, ಜನವರಿ 06 : ಖಾಸಗಿ ಬಸ್ ಮತ್ತು ಬೈಕ್ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ಸಂಭವಿಸಿದೆ.

ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ರ ಕುಂದಾಪುರ ಸಮೀಪ ತಲ್ಲೂರಿನಲ್ಲಿ ಈ ದುರ್ಘಟನೆ ನಡೆದಿದೆ.

ಮೃತ ಬೈಕ್ ಸವಾರನನ್ನು ನೇರಳಕಟ್ಟೆ ರವೀಂದ್ರ ಆಚಾರ್ ಎಂದು ಗುರುತ್ತಿಸಲಾಗಿದೆ.

ಕೆಲಸಕ್ಕೆ ತೆರಳುತ್ತಿದ್ದ ವೇಳೆ ರವಿಂದ್ರ ಅವರ ಬೈಕಿಗೆ ಕೆರಾಡಿಯಿಂದ ಕುಂದಾಪುರಕ್ಕೆ ಸಂಚರಿಸುತ್ತಿದ್ದ ಬಸ್ ಢಿಕ್ಕಿ ಹೊಡೆದಿದೆ.

ಈ ಸಂದರ್ಭದಲ್ಲಿ ರವೀಂದ್ರ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕೊಂಡುಹೋಗುವಷ್ಟರಲ್ಲಿ ಸಾವನ್ನಪ್ಪಿದ್ದಾನೆ.

ಟ್ರಾಫಿಕ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *