BANTWAL
ಬಿಸಿ ರೋಡ್ – ಖಾಸಗಿ ಬಸ್ ಡಿಕ್ಕಿ ಕಾರು ಚಾಲಕ ಗಂಭೀರ ಗಾಯ

ಬಿ.ಸಿ.ರೋಡ್ ಮಾರ್ಚ್ 05: ಖಾಸಗಿ ಬಸ್ ಮತ್ತು ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡಿನ ಸರ್ಕಲ್ ಬಳಿ ಬುಧವಾರ ನಡೆದಿದೆ.

ಗಾಯಾಳುವನ್ನು ಕಾರು ಚಾಲಕ ಕೇರಳ ಮೂಲದ ವಿಶ್ವನಾಥ ಶೆಟ್ಟಿ ಎಂದು ಗುರುತಿಸಲಾಗಿದೆ. ಬಿ.ಸಿ.ರೋಡಿನ ಕಡೆಯಿಂದ ಮೆಲ್ಕಾರ್ ನತ್ತ ಹೋಗುತ್ತಿದ್ದ ವಿಶ್ವನಾಥ ಅವರ ಕಾರಿಗೆ ಮೆಲ್ಕಾರ್-ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
