Connect with us

    LATEST NEWS

    ಉಡುಪಿ – ಖಾಸಗಿ ಬಸ್ ನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಬಸ್ ಸ್ಟ್ಯಾಂಡ್ ನಲ್ಲಿ ಕುಳಿತ ಡ್ರೈವರ್

    ಪಡುಬಿದ್ರಿ ಎಪ್ರಿಲ್ 04 : ಕರಾವಳಿಯಲ್ಲಿ ಖಾಸಗಿ ಬಸ್ ಟೈಮಿಂಗ್ ವಿಚಾರವಾಗಿ ಗಲಾಟೆ ನಡೆಯುತ್ತಲೇ ಇರುತ್ತದೆ. ಆದರೆ ಈ ಬಾರಿ ರಸ್ತೆ ಬದಿ ನಡೆಯಬೇಕಾದ ಗಲಾಟೆ, ಬದಲಾಗಿ ರಸ್ತೆಯ ಮಧ್ಯದಲ್ಲೆ ನಡೆದಿದ್ದು, ಖಾಸಗಿ ಬಸ್ ಡ್ರೈವರ್ ಬಸ್ ನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಸೀದ ಹೋಗಿ ಬಸ್ ಸ್ಟ್ಯಾಂಡ್ ನಲ್ಲಿ ಕುಳಿತಿದ್ದಾನೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


    ಕಾಪುವಿನ ಟೈಂ ಕೀಪರ್ ಶರತ್ ಹಾಗೂ ಖಾಸಗಿ ಬಸ್ ಚಾಲಕ ಅಜೀಜ್ ಮಧ್ಯೆ ಈ ಗಲಾಟೆ ನಡೆದಿದೆ. ಟೈಮಿಂಗ್ ಕುರಿತಾಗಿ ನಡೆದಿದ್ದ ಗಲಾಟೆ ಪಡುಬಿದ್ರಿ ತಲುಪಿದ ವೇಳೆ ಜೋರಾಗಿದೆ. ಸರ್ವಿಸ್ ಬಸ್ ಎಂಎಂಎಸ್‌ಗೆ ಟೈಂ ಕೀಪರ್ ಶರತ್ ಅಡ್ಡ ನಿಂತಾಗ ಕುಪಿತಗೊಂಡ ಚಾಲಕ ಅಜೀಜ್ ಬಸ್ ನ್ನು ರಸ್ತೆ ಅಡ್ಡಲಾಗಿ ನಿಲ್ಲಿಸಿ ಸೀದಾ ಬಸ್ ಸ್ಟ್ಯಾಂಡ್ ಗೆ ತೆರಳಿ ಕುತಿದ್ದಾನೆ.


    ಸುಮಾರು 5 ನಿಮಿಷಗಳ ಕಾಲ ನಡೆದಿದ್ದ ಈ ಪ್ರಹಸನದಲ್ಲಿ ಪಡುಬಿದ್ರಿ ಪೊಲೀಸರ ಮಧ್ಯಪ್ರವೇಶದವರೆಗೂ ಉಡುಪಿ – ಮಂಗಳೂರು ಏಕಮುಖ ರಸ್ತೆಯಲ್ಲಿ ಹೆದ್ದಾರಿ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಇದೀಗ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರಗಳು ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply