LATEST NEWS
ಉಡುಪಿ – ಪ್ರಯಾಣಿಕರ ಜೀವದ ಚೆಲ್ಲಾಟ ಆಡಿದ ಖಾಸಗಿ ಬಸ್ ಚಾಲಕ ಅರೆಸ್ಟ್

ಉಡುಪಿ, ಜೂನ್ 18: ಪ್ರಯಾಣಿಕರ ಜೀವದ ಚೆಲ್ಲಾಟ ಆಡಿದ ಖಾಸಗಿ ಬಸ್ ಚಾಲಕನ್ನು ಉಡುಪಿ ಸಂಚಾರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತನನ್ನು ದೇವರಾಜ್ ಎಂದು ಗುರುತಿಸಲಾಗಿದ್ದು, ಆತ ಚಲಾಯಿಸುತ್ತಿದ್ದ ಬಸ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸ್ ಚಾಲಕ ದೇವರಾಜ್ ಜೂನ್ 17 ರಂದು ಶ್ರೀ ದುರ್ಗಾಂಬ ಖಾಸಗಿ ಬಸ್‌ನ್ನು ಕರಾವಳಿ ಬೈಪಾಸ್ ಕಡೆಯಿಂದ ಉಡುಪಿ ಕಡೆಗೆ ಅತೀವೇಗದಿಂದ ಚಲಾಯಿಸಿಕೊಂಡು ಬಂದಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಮಧ್ಯೆ ತಿರುಗಿ ನಿಂತಿತು. ಬಳಿಕ ಆರೋಪಿ ಚಾಲಕ ಬಸ್ಸನ್ನು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಉಡುಪಿ ಕಡೆಗೆ ಹೋಗಿದ್ದಾನೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಸ್ ಚಾಲಕನ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆರೋಪಿ ಚಾಲಕ ದೇವರಾಜ್‌ನನ್ನು ಬಂಧಿಸಿ, ಬಸ್ಸನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
