ಮಂಡ್ಯ ವಿ.ಸಿ ನಾಲೆಗೆ ಬಸ್ ಉರುಳಿ 24ಕ್ಕೂ ಅಧಿಕ ಸಾವು

ಮಂಡ್ಯ ನವೆಂಬರ್ 24: ಮಂಡ್ಯದ ಕನಗನಮರಡಿಯ ವಿಸಿ ನಾಲೆಗೆ ಖಾಸಗಿ ಬಸ್‌ ಮಗುಚಿ 24 ಕ್ಕೂ ಅಧಿಕ ಮಂದಿ ಪ್ರಯಾಣಿಕರು ಸಾವನಪ್ಪಿರುವ ಘಟನೆ ನಡೆದಿದೆ.

ಪಾಂಡವಪುರದಿಂದ ಕನಗನಮರಡಿ ಮಾರ್ಗವಾಗಿ ಮಂಡ್ಯಕ್ಕೆ ತೆರಳುತ್ತಿದ್ದ ಬಸ್‌ ಚಾಲಕನ ನಿರ್ಲಕ್ಷ್ಯದಿಂದ ನಿಯಂತ್ರಣ ತಪ್ಪಿ ತುಂಬಿ ಹರಿಯುತ್ತಿದ್ದ ನಾಲೆಗೆ ಉರುಳಿದೆ. ಬಸ್‌ನಲ್ಲಿ 40ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಈಗಾಗಲೇ 10ಕ್ಕೂ ಹೆಚ್ಚು ಮೃತ ದೇಹವನ್ನು ಹೊರ ತೆಗೆಯಲಾಗಿದೆ. ಮೃತಪಟ್ಟವರಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್‌ ನಾಲೆಗೆ ಬಿದ್ದಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ಚಾಲಕ ಪರಾರಿಯಾಗಿದ್ದು ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ.

ಘಟನೆ ಬಗ್ಗೆ ಸಿಎಂ ಕುಮಾರಸ್ವಾಮಿ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ಹಾಗೂ ಜಿಲ್ಲಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

VIDEO

3 Shares

Facebook Comments

comments